ಚಾಮರಾಜನಗರ

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದು ಬಿವೈ ವಿಜಯೇಂದ್ರರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಬಿ.ವೈ.ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್ ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ತಪೋಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ಹೋಗಲಾಡಿಸಿ ಮುಂದಿನ ದಿನಗಳಲ್ಲಿ ಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಯುವ ನಾಯಕರಾದ ಬಿ ವೈ ವಿಜಯೇಂದ್ರರವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಮುಖ್ಯಮಂತ್ರಿ ಯನ್ನಾಗಿ ಮಾಡಲು ಅವರ ಅಭಿಮಾನಿಗಳಾದ ನಾವು ಪಣತೊಟ್ಟಿದ್ದೇವೆ. ಅವರು ಮುಖ್ಯಮಂತ್ರಿಯಾದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ. ಅಭಿಮಾನಿಗಳ ಸಹಕಾರದಿಂದ ಮಹಾಶಿವರಾತ್ರಿ ದಿನದಂದು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟದ ವರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದೇ ನಮ್ಮ ಗುರಿ ಎಂದರು.

ರಾಜ್ಯದ ಹಿರಿಯ ಮುತ್ಸದ್ಧಿ ಬಿ.ಎಸ್ ಯಡಿಯೂರಪ್ಪರವರು ಕಳೆದ ವಾರ ರಾಜಕೀಯ ಜೀವನಕ್ಕೆ ಬಂದು 50 ವರ್ಷಗಳು ಪೂರ್ಣಗೊಂಡಿದೆ. ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಸನ್ನದ್ಧರಾಗಬೇಕು. ಬಿ ವೈ ವಿಜೇಂದ್ರರವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ, ಸರ್ಕಾರದ ಭ್ರಷ್ಟಾಚಾರ ಹಾಗೂ ಭ್ರಷ್ಟ ಆಡಳಿತದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇಂತಹ ಯುವ ನಾಯಕರನ್ನು ರಾಜ್ಯದ ದೊರೆಯನ್ನಾಗಿ ಮಾಡಿದರೆ ರಾಜ್ಯವು ನಿರೀಕ್ಷೆಗೂ ಮೀರಿ ಅಭಿವೃದ್ಧಿಯಾಗಲಿದೆ ಎಂದರು.

ಹನೂರು ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಿದ್ದರು ಇದರ ಅಭಿವೃದ್ಧಿ ಶೂನ್ಯವಾಗಿರುವುದರಿಂದ ಚುನಾವಣೆಗೆ ಇನ್ನು ಎರಡು ವರ್ಷವಿದ್ದರು ಬದಲಿ ಸರ್ಕಾರವನ್ನು ತರಲು ಈಗಾಗಲೇ ಬಿಜೆಪಿ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಾಗಿ ಉಪಮುಖ್ಯಮಂತ್ರಿಗಳಾಗಿ ಬಿಎಸ್ ಯಡಿಯೂರಪ್ಪನವರು ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ಅವರ ಸುಪುತ್ರರು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಸುಮಾರು 175 km ಕ್ರಮಿಸಿ ಮಾದೇಶ್ವರನ ಆಶೀರ್ವಾದ ಪಡೆದು ಬಿವೈ ವಿಜಯೇಂದ್ರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಅವರ ಅಭಿಮಾನಿ ಬಳಗದವರು ಹರಕೆ ಒತ್ತಿದ್ದಾರೆ. ಅಭಿಮಾನಿಗಳ ಒತ್ತಾಸೆಯಂತೆ ಬಿವೈ ವಿಜಯೇಂದ್ರರವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಉತ್ತಮ ಕೆಲಸ ಮಾಡಲಿ ಎಂದು ಶುಭ ಕೋರಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲಪುರ ನಂದೀಶ್ ಮಾತನಾಡಿ, ರಾಜ್ಯದ ಹಿರಿಯ ಮುತ್ಸದೆ ಬಿ ಎಸ್ ಯಡಿಯೂರಪ್ಪ ರವರ ಸುಪುತ್ರ ಬಿ ವೈ ವಿಜಯೇಂದ್ರರವರನ್ನು ನಾಡ ದೊರೆಯನ್ನಾಗಿ ಮಾಡಲು ನಾವೆಲ್ಲರೂ ಹಾತೊರೆಯುತ್ತಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿಯನ್ನಾಗಿ ಮಾಡಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆಯಾಗಿ ರೈತರ ಎಲ್ಲರೂ ಸಮೃದ್ಧಿಯಾಗಿರಲಿ ಎಂದು ಪಾದಯಾತ್ರೆ ಮಾಡಿದ್ದೇವೆ ಎಂದರು.

ಅವರನ್ನು ಮುಖ್ಯಮಂತ್ರಿ ಮಾಡಬೇಕೆಂಬುದು ನಮ್ಮ ಆಸೆ: ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿಯಾಗಿದ್ದರು ಎರಡು ಪಕ್ಷಗಳ ನಾಯಕರು ನಮ್ಮ ಪಕ್ಷದವರೇ ಮುಖ್ಯಮಂತ್ರಿ ಯಾವ ಬೇಕು ಎಂಬುದರಿಂದ ಕಾರ್ಯಕರ್ತರಲ್ಲಿ ಒಡಕು ಉಂಟಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ನಮ್ಮ ಮನೆಯ ಕೂಸನ್ನು ನಾವು ಪ್ರೀತಿಸಬೇಕೆ ಹೊರತು ನೆರೆ ಮನೆಯ ಕೂಸನ್ನು ಪ್ರೀತಿಸಲು ಸಾಧ್ಯವಿಲ್ಲ ನಮ್ಮ ಆಸೆ ಬಿ ವೈ ವಿಜೇಂದ್ರ ರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಪಾದಯಾತ್ರೆ ಮಾಡಿದ್ದೇವೆ ಉಳಿದ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿಯವರು ಆರೋಪಿಸಿದ್ದಾರೆ. ಇದೀಗ ಬಿಜೆಪಿ ಶಾಸಕರೇ ಲಂಚ ಪಡೆಯುವಾಗ ನೇರವಾಗಿ ಲೋಕಾಯುಕ್ತಕ್ಕೆ ಸಿಕ್ಕಿ ಬಿದ್ದಿದರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಬಿಜೆಪಿ ಶಾಸಕರು ಲಂಚ ಪಡೆದಿರುವುದನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇವೆ. ಲೋಕಾಯುಕ್ತ ಪೊಲೀಸರು ಸೂಕ್ತ ನ ತನಿಖೆ ಮಾಡಿ ವರದಿ ಬರುವವರೆಗೆ ಏನು ಹೇಳಲು ಆಗುವುದಿಲ್ಲ ಎಂದು ಮೂಡ್ಲುಪುರ ನಂದೀಶ್ ಮಾಧ್ಯಮದವರಿಗೆ ತಿಳಿಸಿದರು.

ಬಿವೈ ವಿಜಯೇಂದ್ರ ಅಭಿಮಾನಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಟ್ಟಕ್ಕೆ ತಲುಪಿದ ನಂತರ ದೇವರ ದರ್ಶನ ಪಡೆದು ಬಿವೈ ವಿಜಯೇಂದ್ರ ಮುಖ್ಯಮಂತ್ರಿಯಾಗಲಿ ಎಂದು ಸಾವಿರದ ಒಂದು ತೆಂಗಿನಕಾಯಿ ಹೊಡೆದು ಹರಕೆ ಸಮರ್ಪಿಸಿದರು. ಕೆಲವು ಅಭಿಮಾನಿಗಳು ರಾಜಗೋಪುರ ಮುಂಭಾಗದಿಂದ ದೇವಸ್ಥಾನದ ಸುತ್ತ ಒಂದು ಸುತ್ತು ಉರುಳು ಸೇವೆ ಮಾಡಿ ಮುಂದಿನ ಮುಖ್ಯಮಂತ್ರಿ ಬಿ ವೈ ವಿಜಯೇಂದ್ರ ಎಂದು ಜಯಘೋಷ ಹಾಕಿದರು.

ಪಾದಯಾತ್ರೆಯಲ್ಲಿ ಕೆ ಐಟಿ ಆರ್ ಎಲ್ ನಿಗಮದ ಮಾಜಿ ಅಧ್ಯಕ್ಷ ರುದ್ರೇಶ್, ಓಬಿಸಿ ಮೋರ್ಚ ಜಿಲ್ಲಾಧ್ಯಕ್ಷ ಜನಧ್ವನಿ ಬಿ ವೆಂಕಟೇಶ್ ಯುವ ಮುಖಂಡ ನಿಶಾಂತ್, ಚೇತನ್, ಪ್ರೀತಮ್, ಮಹೇಶ್ ಸೇರಿದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲಪುರ ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಜತ್ತಿ ಮಲೆ ಮಹದೇಶ್ವರ ಮಂಡಲ ಅಧ್ಯಕ್ಷ ಮುರುಗೇಶ್ ಮುಖಂಡರುಗಳಾದ ಮೋಹನ್, ಯುವ ಮೋರ್ಚಾ ಅಧ್ಯಕ್ಷ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಚಿರಂಜೀವಿ, ಯುವ ಮುಖಂಡರಾದ ನಾಗೇಂದ್ರ, ತೆಳ್ಳನೂರು ವಿಜಯಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

29 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago