ಚಾಮರಾಜನಗರ

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ ದಿನ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಧರಿಸಿ, ದೆವಸ್ಥಾನದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದೇ ರೀತಿ ತಾಲ್ಲೂಕಿನಾದ್ಯಂತ ಎಲ್ಲಾ ಗ್ರಾಮದಲ್ಲಿಯೂ ಸಂಭ್ರಮದಿಂದ ಯುಗಾದಿ ಆಚರಣೆ ಮಾಡಿದರೆ ಹಂಗಳ ಮತ್ತು ದೇವರಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.

ಹಂಗಳ ಗ್ರಾಮದಲ್ಲಿ ಬೆಳಿಗ್ಗೆ ಎಂಟು ಗಂಟೆಗೆ ಗ್ರಾಮದ ಹನ್ನೆರಡು ಮನೆತನವು ಸಂಪ್ರದಾಯದಂತೆ ಹೊನ್ನೇರು ಕಟ್ಟಿ ಸಂಭ್ರಮಿಸಿತು. ನಂತರ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನೂರಾರು ವರ್ಷದಿಂದ ಎತ್ತಿನ ಹಬ್ಬ ಮಾಡುತ್ತಿದ್ದು, ಇದನ್ನು ನೋಡಲು ವಿವಿಧ ಗ್ರಾಮಗಳಿಂದ ನೂರಾರು ಜನರು ಅಗಮಿಸಿ ಎತ್ತಿನಹಬ್ಬ ಕಣ್ತುಂಬಿಕೊಂಡರು.

ಎತ್ತುಗಳಿಗೆ ಅರೋಗ್ಯ ಸಮಸ್ಯೆ ಇದ್ದರೆ ಗುಣವಾಗಲಿ ಎಂದು ಹರಕೆ ಹೊತ್ತು ಎತ್ತಿಗೆ ಹಗ್ಗ ಕಟ್ಟಿ ಓಡಲು ಬಿಡುತ್ತಾರೆ. ಯುವಕರು ಎತ್ತನ್ನು ಹಿಡಿದು ಕಟ್ಟಿಹಾಕಲು ಯತ್ನಿಸುವ ಹಬ್ಬವೇ ಎತ್ತಿನ ಹಬ್ಬ. ಇದನ್ನು ನೋಡಲುಗ್ರಾಮದ ದೇವಸ್ಥಾನ, ಜಗಲಿಕಟ್ಟೆ, ರಸ್ತೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ತಾಲ್ಲೂಕಿನ ಮಾಡ್ರಹಳ್ಳಿ, ನೇನೆಕಟ್ಟೆ, ಮಳವಳ್ಳಿ, ವೀರನಪುರ, ಬನ್ನಿತಾಳಪುರ, ಇಂಗಲವಾಡಿ ಗ್ರಾಮದಲ್ಲಿ ಬುಧವಾರ ಹಬ್ಬ ಬಿದ್ದಾಗ ಮಾತ್ರ ಆಚರಣೆ ಮಾಡುತ್ತಾರೆ. ಬೇರೆ ದಿನ ಹಬ್ಬ ಬಿದ್ದರೆ ಅಚರಣೆ ಮಾಡುವುದಿಲ್ಲ, ಮುಂದಿನ ಬುಧವಾರವೇ ಯುಗಾದಿ ಅಚರಿಸಲಾಗುವುದು. ಕಳೆದ ವರ್ಷ ಬುಧವಾರವೇ ಹಬ್ಬ ಬಿದ್ದ ಕಾರಣ ಅಚರಣೆ ಮಾಡಿದ್ದರು. ಅದರೆ ಈ ವರ್ಷ ಗುರುವಾರ ಬಿದ್ದ ಕಾರಣ ಮುಂದಿನ ಬುಧವಾರಕ್ಕೆ ಹಬ್ಬ ಆಚರಣೆ ಮಾಡಲಾಗುತ್ತದೆ.

 

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ…

6 mins ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

2 hours ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

3 hours ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

3 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

3 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

7 hours ago