ಮಹಾದೇಶ್ ಎಂ ಗೌಡ
ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು, ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು. ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ ದೊಡ್ಡಿ ಹಾಗೂ ಅಂಡೆ ಕುರುಬನ ದೊಡ್ಡಿ ಗ್ರಾಮಸ್ಥರು ಬಿಜೆಪಿ ಯುವ ಮುಖಂಡ ನಿಶಾಂತ್ ರವರ ನೇತೃತ್ವದಲ್ಲಿ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಯುವ ಮುಖಂಡ ನಿಶಾಂತ್ ಮಾತನಾಡಿ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೋಮಣ್ಣನವರು ಚಾಮರಾಜನಗರ ಜಿಲ್ಲೆಯ ಜಿಲ್ಲೆಯ್ಯಾದ್ಯಂತ ರಸ್ತೆ ಅಭಿವೃದ್ಧಿಪಡಿಸಲು ನೂರಾರು ಕೋಟಿ ಅನುದಾನ ಕೊಡಿಸಿದ್ದರು. ಅದರಂತೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸ್ವತಂತ್ರ ಪೂರ್ವದಿಂದಲೂ ಹಲವು ರಸ್ತೆಗಳು ಅಭಿವೃದ್ಧಿಯಾಗಿರಲಿಲ್ಲ. ಈ ಹಿನ್ನೆಲೆ ಕ್ಷೇತ್ರದ ಮುಖಂಡರ ಜೊತೆಗೂಡಿ ವಿ ಸೋಮಣ್ಣರವರ ಸಹಕಾರದಿಂದ ಹತ್ತಕ್ಕೂ ಹೆಚ್ಚು ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ. ಲೊಕ್ಕನಹಳ್ಳಿ ಮುಖ್ಯ ರಸ್ತೆಯಿಂದ ಮಹಾಲಿಂಗನ ಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಲವಾರು ವರ್ಷಗಳಿಂದ ಅಭಿವೃದ್ಧಿಯಾಗಿರಲಿಲ್ಲ. ಈ ವೇಳೆ ಕೆಆರ್ ಐ ಡಿ ಎಲ್ ನಿಗಮದಿಂದ ರಸ್ತೆ ಅಭಿವೃದ್ಧಿಪಡಿಸಲಾಯಿತು. ಹಲವು ರಸ್ತೆಗಳ ಅಭಿವೃದ್ಧಿಗೆ ಹಿಂದಿನ ಶಾಸಕರು ಅವಕಾಶ ಮಾಡಿಕೊಡಲಿಲ್ಲ, ಆದರೂ ಕೆಲವು ಕಡೆ ಯಾವುದಕ್ಕೂ ಜಗ್ಗದೆ ಬಿಜೆಪಿ ಸರ್ಕಾರದ ಯೋಜನೆಗಳನ್ನು ಹನೂರು ಕ್ಷೇತ್ರದ ಜನರಿಗೆ ತಲುಪಿಸಲಾಗಿದೆ ಎಂದರು.
ಅದೇ ರೀತಿ ಕಳೆದ 2022ರ ಜುಲೈನಲ್ಲಿಯೇ ಅಂಡೆ ಕುರುಬನ ದೊಡ್ಡಿ ಗ್ರಾಮದಿಂದ ಹುಣಸೆಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ 2.2 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ಶಾಸಕರು ನಾನು ಅನುದಾನ ತಂದು ಅಭಿವೃದ್ಧಿ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಬೈಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಸದಾನಂದ್ ಮೂರ್ತಿರವರು ಹಗಲಿರುಳು ಶ್ರಮಿಸಿದ್ದಾರೆ. ಈ ಅನುದಾನ ತರಲು ಯಾವುದೇ ಪಾತ್ರವಿಲ್ಲದೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಅನುದಾನ ತಂದ ಹಾಲಿ ಅಧ್ಯಕ್ಷ ಸದಾನಂದಮೂರ್ತಿ ರವರಿಗೆ ರಸ್ತೆ ಭೂಮಿ ಪೂಜೆಗೆ ಅಹ್ವಾನ ನೀಡದೇ ಆಗೌರವ ತೋರಿದ್ದಾರೆ ಎಂದು ಆರೋಪಿಸಿದರು.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಲೆಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ವಿ ಸೋಮಣ್ಣ ಹಾಗೂ ಮುಖ್ಯಮಂತ್ರಿಗಳಾಗಿದ್ದ ಬಸವರಾಜ್ ಬೊಮ್ಮಾಯಿ ರವರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಮಾಡಲು ಅವಕಾಶ ನೀಡಲಿಲ್ಲ. ಇದೀಗ ಕಾಂಗ್ರೆಸ್ ಸರ್ಕಾರ ಹುಲಿಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭೌಗೋಳಿಕವಾಗಿ ಹನೂರು ತಾಲೂಕು ಅರಣ್ಯದ ಮಧ್ಯ ಭಾಗದಲ್ಲಿ ಬರುವುದರಿಂದ ಯಾವುದೇ ಕಾರಣಕ್ಕೂ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಮಾಡಲು ಸಾಧ್ಯವಿಲ್ಲ ಒಂದೊಮ್ಮೆ ಘೋಷಣೆ ಮಾಡಿದರೂ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿ, ಈ ಪ್ರಕರಣವನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಭಾರತದ ಸಿಕ್ಕಿಂ, ಅರುಣಾಚಲ ಪ್ರದೇಶ ಅಸ್ಸಾಂನಲ್ಲಿ ಪ್ರತಿನಿತ್ಯ ಮಾನವ ಪ್ರಾಣಿ ಸಂಘರ್ಷ ನಡೆಯುತ್ತಲೇ ಇದೆ. ಇದೇ ನಿಟ್ಟಿನಲ್ಲಿ ಅಲ್ಲಿಯೂ ಸಹ ಹಲವರು ತರಬೇತಿಗಳನ್ನು ನೀಡುವ ಮೂಲಕ ಪ್ರಾಣಿಗಳ ಜೊತೆ ಯಾವ ರೀತಿ ಹೊಂದಾಣಿಕೆ ಮಾಡಿಕೊಳ್ಳಬೇಕು. ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅದೇ ರೀತಿ ಮುಂದಿನ ದಿನಗಳಲ್ಲಿ ಹನೂರು ಕ್ಷೇತ್ರದಲ್ಲಿಯೂ ಕಾಡಂಚಿನ ಗ್ರಾಮಗಳಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ತರಬೇತಿ ಕೊಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ನಿರಂತರವಾಗಿ ನಡೆಯುತ್ತಲೇ ಇದೆ. ವ್ಯಕ್ತಿ ಮೃತಪಟ್ಟಾಗ ಸರ್ಕಾರ ಕೇವಲ ಪರಿಹಾರ ಘೋಷಣೆ ಮಾಡಿದರೆ, ಸಮಸ್ಯೆ ಬಗೆಯಹರಿಯುವುದಿಲ್ಲ ಬದಲಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೈಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಾನಂದಮೂರ್ತಿ ಮಾತನಾಡಿ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ರಸ್ತೆಗಳು ಅಭಿವೃದ್ಧಿಯಾಗದೆ ಇದ್ದ ಹಿನ್ನೆಲೆ ಜಲ ಉಸ್ತುವಾರಿ ಸಚಿವರಾಗಿದ್ದ ಬಿ ಸೋಮಣ್ಣ ರವರ ಬಳಿ ಮನವಿ ಮಾಡಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿತ್ತು. ಪಾಂಡೆ ಕುರುಬನ ದೊಡ್ಡಿ ಗ್ರಾಮದ ರಸ್ತೆಗೆ ಅನುಮೋದನೆಯಾಗಿ ಅನುದಾನ ಬಿಡುಗಡೆಯಾಗುವ ವೇಳೆ ಚುನಾವಣೆ ಬಂದಿದ್ದರಿಂದ ರಸ್ತೆ ಕಾಮಗಾರಿಗೆ ಹಿನ್ನಡೆ ಆಯಿತು. ತದನಂತರ ಕಾಂಗ್ರೆಸ್ ಸರ್ಕಾರ ಬಂದ ನಂತರ ಕಾಮಗಾರಿ ಮಾಡಿಕೊಡುವಂತೆ ಮನವಿ ಮಾಡಿದರು ಅನುದಾನದ ಕೊರತೆಯಿಂದ ಅಭಿವೃದ್ಧಿ ಆಗಲಿಲ್ಲ, ಇದೀಗ ಡಾಂಬರು ರಸ್ತೆಗೆ ಶಾಸಕ ಎಂ ಆರ್ ಮಂಜುನಾಥ್ ರವರು ಮೆಟ್ಟಿನ ರಸ್ತೆಗೆ ಭೂಮಿ ಪೂಜೆ ಸಲ್ಲಿಸಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಉಮಾ ಮಹೇಶ್ವರಿ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕ ರಸ್ತೆ ಸಾರಿಗೆ ವ್ಯವಸ್ಥೆ ಇಲ್ಲದೆ ಇರುವುದರಿಂದ ರೈತರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆ ಇಲ್ಲದೆ ಖಾಸಗಿ ವಾಹನದ ಮೂಲಕ ಚಿಕಿತ್ಸೆ ಪಡೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಮುಂದಿನ ದಿನಗಳಲ್ಲಿ ಶಾಸಕರು ಹಾಗೂ ಜನಪ್ರತಿನಿಧಿಗಳು ನಮ್ಮ ಗ್ರಾಮಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಯುವ ರೈತ ಮುಖಂಡ ಅವತಾರ್ ಶಿವ ಮಾತನಾಡಿದರು. ಪ್ರತಿಭಟನೆಯಲ್ಲಿ ಗ್ರಾಮದ ಮಹಿಳೆಯರು ರೈತ ಮುಖಂಡರು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…