ಚಾಮರಾಜನಗರ

ಹನೂರು: ಡ್ರೋನ್‌ ಮೂಲಕ ನಿವೇಶನ ಗುರುತಿಸಿ ಪಿಆರ್‌ ಕಾರ್ಡ್ ನೀಡಲು ಯೋಜನೆ: ಎಂಆರ್‌ ಮಂಜುನಾಥ್

ಹನೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನಗಳ ದಾಖಲಾತಿಗಳು ಸಮರ್ಪಕವಾಗಿ ಇಲ್ಲದೇ ಇರುವುದರಿಂದ ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾಮಿತ್ವ ಯೋಜನೆ ಗ್ರಾಮ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಠಾಣಾ ವ್ಯಾಪ್ತಿಯಲ್ಲಿರುವ ನಿವೇಶನಗಳನ್ನು ‌ ಡ್ರೋನ್ ಹಾಗೂ ಯುಎಬಿ ತಂತ್ರಜ್ಞಾನದ ಮೂಲಕ ಸರ್ವೆ ನಡೆಸಿ ಡ್ರೋನ್ ಮುಖಾಂತರ ನಿಮ್ಮ ಜಾಗದ ಅಳತೆಯನ್ನು ನಡೆಸಿ ನಿಮಗೆ ಪಿ ಆರ್ ಕಾರ್ಡ್ ವಿತರಣೆ ಮಾಡಲಾಗುವುದು, ಈ ಪಿಆರ್ ಕಾರ್ಡಿನಲ್ಲಿ ನಿಮ್ಮ ನಿವೇಶನಕ್ಕೆ ಸಂಬಂಧಪಟ್ಟಂತೆ ಎಲ್ಲ ಮಾಹಿತಿಗಳು ಸಿಗುತ್ತದೆ. ಇದಲ್ಲದೆ ನೀವು ನಿಮ್ಮ ಜಾಗದ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ಮುಖಾಂತರ ತಿಳಿದುಕೊಳ್ಳಬಹುದು ಈ ಯೋಜನೆಯನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಯು.ಎ.ವಿ ತಂತ್ರಜ್ಞಾನದ ಮೂಲಕ ಹಾಗೂ ಡ್ರೋನ್ ಮುಖಾಂತರ ಪ್ರಾಯೋಗಿಕವಾಗಿ ಅಜ್ಜಿಪುರ ಮತ್ತು ಸುಳ್ಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸರ್ವೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಈ ಯೋಜನೆ ಮುಂದುವರೆಯಲಿದೆ, ಮೊದಲು ಗ್ರಾಮಪಟಣ ವ್ಯಾಪ್ತಿಗಳಲ್ಲಿ ಸರ್ವೆ ನಡೆಸಲಾಗುವುದು ನಂತರ ಮರು ಸರ್ವೆ ನಡೆಸಿ ಜಮೀನುಗಳಲ್ಲಿ ನಿರ್ಮಾಣ ಮಾಡಿಕೊಂಡಿರುವ ಮನೆ ಹಾಗೂ ನಿವೇಶನಗಳ ಬಗ್ಗೆ ಸರ್ವೆ ಮಾಡಿಸಿ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಡಿಡಿ ಎಲ್ ಆರ್ ವಿದ್ಯಾರಾಣಿ ಮಾತನಾಡಿ ಕಳೆದ 50 ವರ್ಷಗಳ ಹಿಂದೆ ಕಂದಾಯ ಕಟ್ಟಿರುವ ಜಮೀನುಗಳಿಗೆ ಮಾತ್ರ ಸರ್ವೆ ಮಾಡಲಾಗಿತ್ತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಆಸ್ತಿಗಳ ಬಗ್ಗೆ ಸಮರ್ಪಕ ದಾಖಲಾತಿಗಳು ಲಭ್ಯವಿಲ್ಲದೆ ಇರುವುದರಿಂದ ಇದೀಗ ಡ್ರೋನ್ ಮುಖಾಂತರ ನಿವೇಶನಗಳನ್ನು ಸರ್ವೆ ಮಾಡಲಾಗುತ್ತಿದೆ. ನಿವೇಶನದ ಮಾಲೀಕರು ಹಾಗೂ ಗ್ರಾಮ ಪಂಚಾಯಿತಿಯವರ ಜೊತೆ ಚರ್ಚೆ ನಡೆಸಿ ಪಿಆರ್ ಕಾರ್ಡ್ ಗಳ ಡ್ರಾಪ್ಟಗಳನ್ನು ವಿತರಿಸಲಾಗುತ್ತಿದೆ. ಈ ಕಾಡಿನಲ್ಲಿ ಯಾವುದಾದರೂ ತೊಂದರೆಗಳಿದ್ದಲ್ಲಿ ಪಂಚಾಯಿತಿ ಪಿಡಿಒ ಅಧಿಕಾರಿಗಳ ಮುಖಾಂತರ ಸರಿಪಡಿಸಿಕೊಳ್ಳಬೇಕು. ಯಾವುದೇ ತೊಂದರೆಗಳಿಲ್ಲದಿದ್ದರೆ 30 ದಿನಗಳ ಒಳಗಾಗಿ ನಿಮ್ಮ ಸಂಪೂರ್ಣ ಮಾಹಿತಿಯುಳ್ಳ ಪಿಆರ್ ಕಾರ್ಡ್ ವಿತರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಗುರುಪ್ರಸಾದ್, ಇಒ ಉಮೇಶ್, ಎಡಿಎಲ್ ಆರ್ ನಟರಾಜು, ಸರ್ವೆ ಸೂಪರ್ವೈಸರ್ ಭಾನುರೇಖಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರ ನಾಯಕ್, ಉಪಾಧ್ಯಕ್ಷ ಪ್ರಭುಸ್ವಾಮಿ, ಸದಸ್ಯರಾದ ಚಂದ್ರು, ಮುರುಳಿ, ರಾಜೇಂದ್ರ ಸೈಯದ್ ಜಬ್ಬಾರ್, ಕೃಷ್ಣಮೂರ್ತಿ, ಶಿವಮೂರ್ತಿ, ರಾಜೇಂದ್ರ, ಪಿಡಿಒ ನಂದೀಶ್, ಕಾರ್ಯದರ್ಶಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಇನ್ನಿತರರು ಹಾಜರಿದ್ದರು .

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

8 mins ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

32 mins ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

47 mins ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

48 mins ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

49 mins ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

50 mins ago