Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ವಾರಾಂತ್ಯ ರಜೆ : ಮ.ಬೆಟ್ಟಕ್ಕೆ ಹರಿದು ಬಂದು ಜನಸಾಗರ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಂತ್ಯದ ರಜೆ ಇದ್ದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು.

ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದರು. ವಾರಂತ್ಯದ ದಿನಗಳಾದ ಶನಿವಾರ ಹಾಗೂ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿ ತಮ್ಮ ಹರಕೆ ಕಾಣಿಕೆಗಳನ್ನು ಸಲ್ಲಿಸಿ ದೇವರ ದರ್ಶನ ಪಡೆದರು.

ಭಾನುವಾರ ಮುಂಜಾನೆ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, ಹಾಲು, ಪಂಚಾಮೃತ ಅಭಿಷೇಕ ಪೂಜೆ ನೆರವೇರಿತು. ನೈವೇದ್ಯ ಅರ್ಪಿಸಿದ ಬಳಿಕ ಮಹಾ ಮಂಗಳಾರತಿ ಮಾಡಲಾಯಿತು.

ಹರಕೆಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆಯನ್ನು ಕೈಗೊಂಡಿದ್ದರು. ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸವ ವಾಹನ, ಹುಲಿ ವಾಹನ ರುದ್ರಾಕ್ಷಿ ಮಂಟಪ ಸೇವೆಗಳನ್ನು ಮಾಡುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿದರು.

೫೪೦ ಟಿಕೆಟ್ ಚಿನ್ನದ ತೇರು :
ಚಿನ್ನದ ತೇರು ಎಳೆಸಲು ಹರಕೆ ಹೊತ್ತ ಭಕ್ತರು ವಾರಂತ್ಯದಲ್ಲಿ ದಾಖಲೆಯ ಟಿಕೆಟ್ ಖರೀದಿ ಮಾಡಿ ಚಿನ್ನದ ತೇರು ಎಳೆಸಿದ್ದಾರೆ. ಇದೇ ಮೊದಲ ಬಾರಿಗೆ ವಾರಾಂತ್ಯದಲ್ಲಿ ೫೪೦ ಟಿಕೆಟ್ ಖರೀದಿಯಾಗಿದ್ದು ಚಿನ್ನದ ತೇರಿನ ಟಿಕೆಟ್ ಬೃಹತ್ ಮಟ್ಟದಲ್ಲಿ ಖರೀದಿಯಾಗಿದೆ. ದಾಖಲೆ ಮೊತ್ತದಲ್ಲಿ ಹಣ ಪ್ರಾಧಿಕಾರಕ್ಕೆ ಹರಿದು ಬಂದಿದೆ.

ಇದನ್ನು ಓದಿ: ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಆಟೋ ವೀಲ್ಹಿಂಗ್‌ ಪುಂಡಾಟ

ಕಾರ್ತಿಕ ಮಾಸದ ಪ್ರಯುಕ್ತ ಹಾಗೂ ,ಶನಿವಾರ, ಭಾನುವಾರ ರಜೆ ಪ್ರಯುಕ್ತ ಮ.ಬೆಟ್ಟಕ್ಕೆ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಜನರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ನಂಜನಗೂಡು ಗುಂಡ್ಲುಪೇಟೆ ಹಾಗೂ ಇನ್ನಿತರ ಕಡೆಗಳಿಂದ ಸಾವಿರಾರು ಮಲೆ ಮಹದೇಶ್ವರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಕ್ಷೇತ್ರಕ್ಕೆ ಆಗಮಿಸಿದ್ದರು.

ಪ್ರಾಧಿಕಾರದಿಂದ ಸಕಲ ವ್ಯವಸ್ಥೆ :
ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಭಕ್ತಾದಿಗಳ ಅನುಕೂಲಕ್ಕೆ ತಕ್ಕಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಽಕಾರದ ವತಿಯಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ವಿಶೇಷಚೇತನರು ಹಾಗೂ ವಯೋವೃದ್ಧರಿಗೆ ರಾಜಗೋಪುರದ ಪ್ರತ್ಯೇಕ ಕ್ಯೂನಲ್ಲಿ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ನೂಕು ನುಗ್ಗಲು ಆಗದಂತೆ ಪ್ರತ್ಯೇಕವಾಗಿ ಅತಿಥಿ ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ವಿಶೇಷ ದಾಸೋಹ, ನೆರಳಿನ ವ್ಯವಸ್ಥೆ ಕಲ್ಪಿಸಲಾಗಿತ್ತು.

Tags:
error: Content is protected !!