ಚಾಮರಾಜನಗರ : ತಮಿಳುನಾಡಿನಿಂದ ಕರ್ನಾಟಕದತ್ತ ಬರುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳದ ಬಸ್ ವೊಂದು ತಮಿಳುನಾಡಿನ ತೀರ್ಥಕ್ಷೇತ್ರಗಳನ್ನು ನೋಡಿಕೊಂಡು ಚಾಮರಾಜನಗರ ಜಿಲ್ಲೆಯ ಬಂಡೀಪುರ ಮಾರ್ಗವಾಗಿ ಕರ್ನಾಟಕಕ್ಕೆ ಬರುತ್ತಿದ್ದಾಗ ಇಳಿಜಾರಿನ ರಸ್ತೆಯಲ್ಲಿ ಬ್ರೇಕ್ ಫೇಲ್ ಆಗಿ ಅವಘಡ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಡುಗೆ ಸಿಬ್ಬಂದಿ ಸೇರಿದಂತೆ 65 ಮಂದಿ ಈ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. 25 ಮಂದಿ ಗಾಯಗೊಂಡಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಬಹುಪಾಲು ಮಂದಿ ಹಾಗೂ ಗಾಯಗೊಂಡ ಅನೇಕರು ಹಿರಿಯ ನಾಗರಿಕರಾಗಿದ್ದಾರೆ. ಗಾಯಾಳುಗಳನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…
‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…