ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಶಾಸಕ ಎಂಆರ್ ಮಂಜುನಾಥ್ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನಿಸಿದರು.
ಈ ವೇಳೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಮಾತನಾಡಿ ಕಳೆದ 4 ವರ್ಷಗಳಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ 9 ಕೋಟಿ ಅನುದಾನ ನೀಡಲಾಗಿದ್ದು, ನೀರಾವರಿ ಸಮಸ್ಯೆಗೆ ನಮ್ಮ ಸರ್ಕಾರ ಸೂಕ್ತ ಕ್ರಮ ವಹಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದ್ದರೆ ಅದನ್ನು ಪರಿಹಾರ ಮಾಡಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮುಂದುವರೆದು ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಹನೂರು ತಾಲೂಕು ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿದೆ. ಹನೂರು ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ 10 ಗ್ರಾಮ ಪಂಚಾಯಿತಿಗಳು ಅರಣ್ಯದ ಮಧ್ಯಭಾಗದಲ್ಲಿ ಇರುವುದರಿಂದ ಅರಣ್ಯ ಇಲಾಖೆಯವರು ಕಾಮಗಾರಿ ಮಾಡಲು ಅನುಮತಿ ನೀಡದೆ ಇರುವುದರಿಂದ ಕಾಮಗಾರಿ ವಿಳಂಬವಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ಪೂರ್ಣಗೊಂಡಿಲ್ಲ ಮುಂದಿನ ತಿಂಗಳು ಕೇಂದ್ರ ಸರ್ಕಾರದಿಂದ ಕಾಮಗಾರಿ ನಡೆಸಲು ಒಪ್ಪಿಗೆ ಸಿಗಲಿದೆ ಎಂಬ ಭರವಸೆ ಇದೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಈ ಯೋಜನೆ ಪೂರ್ಣಗೊಳಿಸಲು ಇನ್ನಿಲ್ಲದ ಕಸರತ್ತು ನಡೆಸಲಾಗುತ್ತಿದೆ ಆದರೂ ಪೂರ್ಣಗೊಂಡಿಲ್ಲ ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಮಪುರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದಿದೆ ಪ್ರತಿ ವರ್ಷವೂ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ ಆದರೆ ನೀರು ಬರುತ್ತಿಲ್ಲ ನೀರು ಬರುವವರೆಗೂ ಕೊಳವೆಬಾವಿಯನ್ನು ಕೊರೆಸುವಂಥಾಗಿದೆ ಎಂದರು.
ರಾಮಪುರ ಹೋಬಳಿ ವ್ಯಾಪ್ತಿಯ ರೈತರು ಹಾಗೂ ಸಾರ್ವಜನಿಕರಿಗೆ ನೀರಾವರಿ ಯೋಜನೆ ಕಲ್ಪಿಸಲು ಬಜೆಟ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪ ಸಂಸದ ಸುನಿಲ್ ಬೋಸ್ ರವರು ಹಾಗೂ ಅಧಿಕಾರಿಗಳಿಗೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆ ಸಲ್ಲಿಸಿದರು.
ಇನ್ನು ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರನ್ನು ಸಂಗ್ರಹಿಸಲು ಚೆಕ್ ಡ್ಯಾಮ್ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆ ವತಿಯಿಂದ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…