ಚಾಮರಾಜನಗರ

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಶಾಸಕ ಎಂಆರ್ ಮಂಜುನಾಥ್ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನಿಸಿದರು.

ಈ ವೇಳೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಮಾತನಾಡಿ ಕಳೆದ 4 ವರ್ಷಗಳಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ 9 ಕೋಟಿ ಅನುದಾನ ನೀಡಲಾಗಿದ್ದು, ನೀರಾವರಿ ಸಮಸ್ಯೆಗೆ ನಮ್ಮ ಸರ್ಕಾರ ಸೂಕ್ತ ಕ್ರಮ ವಹಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದ್ದರೆ ಅದನ್ನು ಪರಿಹಾರ ಮಾಡಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಮುಂದುವರೆದು ಶಾಸಕ ಎಂಆರ್‌ ಮಂಜುನಾಥ್ ಮಾತನಾಡಿ ಹನೂರು ತಾಲೂಕು ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿದೆ. ಹನೂರು ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ 10 ಗ್ರಾಮ ಪಂಚಾಯಿತಿಗಳು ಅರಣ್ಯದ ಮಧ್ಯಭಾಗದಲ್ಲಿ ಇರುವುದರಿಂದ ಅರಣ್ಯ ಇಲಾಖೆಯವರು ಕಾಮಗಾರಿ ಮಾಡಲು ಅನುಮತಿ ನೀಡದೆ ಇರುವುದರಿಂದ ಕಾಮಗಾರಿ ವಿಳಂಬವಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ಪೂರ್ಣಗೊಂಡಿಲ್ಲ ಮುಂದಿನ ತಿಂಗಳು ಕೇಂದ್ರ ಸರ್ಕಾರದಿಂದ ಕಾಮಗಾರಿ ನಡೆಸಲು ಒಪ್ಪಿಗೆ ಸಿಗಲಿದೆ ಎಂಬ ಭರವಸೆ ಇದೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಈ ಯೋಜನೆ ಪೂರ್ಣಗೊಳಿಸಲು ಇನ್ನಿಲ್ಲದ ಕಸರತ್ತು ನಡೆಸಲಾಗುತ್ತಿದೆ ಆದರೂ ಪೂರ್ಣಗೊಂಡಿಲ್ಲ ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಮಪುರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದಿದೆ ಪ್ರತಿ ವರ್ಷವೂ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ ಆದರೆ ನೀರು ಬರುತ್ತಿಲ್ಲ ನೀರು ಬರುವವರೆಗೂ ಕೊಳವೆಬಾವಿಯನ್ನು ಕೊರೆಸುವಂಥಾಗಿದೆ ಎಂದರು.

ರಾಮಪುರ ಹೋಬಳಿ ವ್ಯಾಪ್ತಿಯ ರೈತರು ಹಾಗೂ ಸಾರ್ವಜನಿಕರಿಗೆ ನೀರಾವರಿ ಯೋಜನೆ ಕಲ್ಪಿಸಲು ಬಜೆಟ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪ ಸಂಸದ ಸುನಿಲ್ ಬೋಸ್ ರವರು ಹಾಗೂ ಅಧಿಕಾರಿಗಳಿಗೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆ ಸಲ್ಲಿಸಿದರು.

ಇನ್ನು ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರನ್ನು ಸಂಗ್ರಹಿಸಲು ಚೆಕ್ ಡ್ಯಾಮ್ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆ ವತಿಯಿಂದ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

60 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago