Mysore
23
overcast clouds
Light
Dark

ತಿ.ನರಸೀಪುರದಲ್ಲಿ ಶೇವಾರು ಮತದಾನ ಎಷ್ಟು !

ತಿ.ನರಸೀಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಶೇ. ಮತದಾನವಾಗಿದೆ.

ಕ್ಷೇತ್ರದ ೨೨೮ ಮತಗಟ್ಟೆ ಕೇಂದ್ರಗಳಲ್ಲಿ ಬೆಳಿಗ್ಗೆ ೭ ರಿಂದ ಆರಂಭಗೊಂಡ ಮತದಾನ ಪ್ರಕ್ರಿಯಲ್ಲಿ ಪ್ರಾರಂಭದಲ್ಲಿ ಹಲವು ಮತಗಟ್ಟೆಗಳಲ್ಲಿ ಚುರುಕಿನಿಂದ ನಡೆಯಿತು. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗಿತು. ಮಧ್ಯಾಹ್ನದ ನಂತರ ಬಹುತೇಕ ಮತಗಟ್ಟೆಗಳಲ್ಲಿ ಬಿರುಸಿನ ಮತದಾನ ನಡೆಯಿತು.

ಕ್ಷೇತ್ರದ ಒಂದೆರೆಡು ಕಡೆ ತಾಂತ್ರಿಕ ದೋಷ ಕಂಡು ಬಂದಿಂತಾದರೂ ತಕ್ಷಣವೇ ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ಮತಗಟ್ಟೆ ಬಳಿ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೋರುತ್ತಿದ್ದರು.

ತಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಎಂ. ಅಶ್ವಿನ್ ಕುವಾರ್ ವರುಣ ವಿಧಾನಸಭಾ ಕ್ಷೇತ್ರದ ತುಂಬಲ ಗ್ರಾಮದ ಮತಗಟ್ಟೆಯಲ್ಲಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಅವರು ಪಟ್ಟಣದ ಪಿಆರ್‌ಎಂ ಕಾಲೇಜಿನಲ್ಲಿ ಮತದಾನ ಮಾಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕುರುಬೂರಿನಲ್ಲಿ, ವಾಟಾಳು ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ವಾಟಾಳು ಗ್ರಾಮದಲ್ಲಿ, ಪುರಸಭಾ ಮಾಜಿ ಅಧ್ಯಕ್ಷ ಹೆಳವರಹುಂಡಿ ಎನ್.ಸೋಮು ಹೆಳವರಹುಂಡಿ ಗ್ರಾಮದಲ್ಲಿ ಮತ ಚಲಾಯಿಸಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್. ಸಿ ಮಹದೇವಪ್ಪ ಅವರು ಬನ್ನೂರು – ಕೇತುಪುರ, ಸಿದ್ದನಹಂಡಿ ಗ್ರಾಮಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು.

ತಾಲ್ಲೂಕಿನ ಕಗ್ಗಲೀಪುರ, ಕೇತುಪುರ ನಿಲುಸೋಗೆ, ಮೂಗೂರು, ಆಲಗೂಡು, ಮಾದಾಪುರ, ಹೆಮ್ಮಿಗೆ ಮೊದಲಾದ ಗ್ರಾಮಗಳಲ್ಲಿ ಮತದಾನ ಮಾಡಲು ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದು ಕಂಡುಬಂದಿತು.