ಚಾಮರಾಜನಗರ

ಸುನೀಸ್‌ ಬೋಸ್‌ ಹುಟ್ಟುಹಬ್ಬದಂದು ಬೃಹತ್‌ ಉದ್ಯೋಗ ಮೇಳ

ಬನ್ನೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೈಮುಲ್ ಅಧ್ಯಕ್ಷ ಚೆಲುವರಾಜು ಮಾಹಿತಿ

ತಿ.ನರಸೀಪುರ : ಚಾಮರಾಜನಗರ ಕ್ಷೇತ್ರದ ಸಂಸದ ಸುನಿಲ್ ಬೋಸ್‌ರವರ ಹುಟ್ಟುಹಬ್ಬದ ಅಂಗವಾಗಿ ಬನ್ನೂರು ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಆರ್.ಚೆಲುವರಾಜು ಹೇಳಿದರು.

ಆ.31 ರಂದು ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉದ್ಯೋಗ ಮೇಳ ಹಾಗೂ ಹುಟ್ಟುಹಬ್ಬ ಆಚರಣೆ ಕುರಿತಂತೆ ರೂಪರೇಷೆ ಸಿದ್ಧಪಡಿಸಲು ಬನ್ನೂರಿನ ಅತಿಥಿ ಗೃಹದಲ್ಲಿ ಕರೆಯಲಾಗಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಸಂಸದ ಸುನೀಲ್ ಬೋಸ್ ರವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಆ.31ರಂದು ಬನ್ನೂರಿನ ಫುಟ್‌ಬಾಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಬೋಸ್‌ರವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

2 ವರ್ಷಗಳ ಹಿಂದೆ ತಿ.ನರಸೀಪುರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿ ಅನೇಕ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸಿ ಕೊಡುವ ಪ್ರಯತ್ನ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಬನ್ನೂರು ಪಟ್ಟಣದಲ್ಲಿ ಈ ಬಾರಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಮೇಳದಲ್ಲಿ ನೂರಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿವೆ ಎಂದರು.

ಉದ್ಯೋಗ ಮೇಳ, ಸಂಸದರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಕಾರ್ಯಕರ್ತರದ್ದಾಗಿದೆ. ಉದ್ಯೋಗ ಮೇಳ ನಡೆಯುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ತಮ್ಮ ಗ್ರಾಮಕ್ಕೆ ಬಂದ ಪ್ರಚಾರ ವಾಹನವನ್ನು ಸ್ವಾಗತಿಸಿ ಕರಪತ್ರಗಳು ಹಾಗೂ ವಾಲ್‌ಪೋಸ್ಟರ್‌ಗಳನ್ನು ಗೋಡೆಗಳಿಗೆ ಅಂಟಿಸಿ ಕಾರ್ಯಕ್ರಮಕ್ಕೆ ಪ್ರಚಾರ ನೀಡಬೇಕು ಎಂದು ಕರೆ ನೀಡಿದರು.

ತಮ್ಮ ಗ್ರಾಮಗಳಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರನ್ನು ಗುರುತಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಅವರಿಗೆ ಮಾಹಿತಿ ನೀಡಿ ಅವರು ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ತಿಳಿಸಿದರು.

ಉದ್ಯೋಗ ಮೇಳದ ಜೊತೆಗೆ ಅಂದು ಸುನೀಲ್ ಬೋಸ್ ರವರ ಹುಟ್ಟುಹಬ್ಬ ಆಚರಣೆ ಇರುವುದರಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಂಸದರನ್ನು ಮೆರವಣಿಗೆ ಮೂಲಕ ಕರೆತಂದು ಹುಟ್ಟುಹಬ್ಬ ಆಚರಿಸಬೇಕು. ಈ ಸಂಬಂಧ ಅವರ ಹುಟ್ಟುಹಬ್ಬವನ್ನು ಯಾವ ರೀತಿ ಆಚರಸಬೇಕು ಎಂಬ ಬಗ್ಗೆ ಕಾರ್ಯಕರ್ತರು ಸಲಹೆ ಸೂಚನೆ ನೀಡಿದರೆ ಅವರ ಅಭಿಪ್ರಾಯದ ಪ್ರಕಾರವೇ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದರು.

ಪಿಕಾರ್ಡ್ ಬ್ಯಾಂಕಿನ ಮಾಜಿ ಅಧ್ಯಕ್ಷ ಕೆ.ವಜ್ರೇಗೌಡ ಮಾತನಾಡಿ, 2 ವರ್ಷಗಳ ಹಿಂದೆ ನರಸೀಪುರದಲ್ಲಿ ನಡೆದ ಉದ್ಯೋಗ ಮೇಳವನ್ನು ಮೀರಿಸುವಂತಹ ಕಾರ್ಯಕ್ರಮ ಆ.31ರಂದು ನಡೆಯುವ ಕಾರ್ಯಕ್ರಮವಾಗಬೇಕು. ನಮ್ಮ ಸಂಸದರು ಮಾಡಬೇಕೆಂಬ ಕೆಲಸವನ್ನು ಸಮಯ ಸಿಕ್ಕರೆ ಕ್ಷಣ ಮಾತ್ರದಲ್ಲಿ ಮಾಡಿಕೊಡಲಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಅಂತಹವರ ಹುಟ್ಟುಹಬ್ಬ ಸ್ಮರಣೀಯವಾಗಿ ಜರುಗಬೇಕು.

ಆ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಸೇರಿ ಕಾರ್ಯಕ್ರಮ ಯಶಸ್ವಿಯಾಗಿ ಮಾಡಲು ಶ್ರಮಿಸಬೇಕು. ಬನ್ನೂರಿನಲ್ಲಿ ನಡೆಯುವ ಜನ್ಮದಿನದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಉದ್ಯೋಗ ಮೇಳ ಹಾಗೂ ಹುಟ್ಟುಹಬ್ಬ ಆಚರಣೆ ಮಾಡೋಣ. ಕಾರ್ಯಕರ್ತರು ನಮಗೆ ಸಹಕಾರ ನೀಡಿದರೆ, ನಾವು ನಿಮಗೆ ಯಾವುದೇ ರೀತಿಯ ಪ್ರೋತ್ಸಾಹ ಕೊಡಲು ಸಿದ್ಧರಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದರು.

ಹಿಂದುಳಿದ ವರ್ಗಗಳ ಅಧ್ಯಕ್ಷ ಎ.ಎನ್.ಸ್ವಾಮಿ ಮಾತನಾಡಿ, ಸುನಿಲ್ ಬೋಸ್ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಉದ್ಯೋಗ ಮೇಳ ದಾಖಲೆ ನಿರ್ಮಿಸಬೇಕು. ನೂರಾರು ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತಾಗಬೇಕು. ಆದ್ದರಿಂದ ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕು ಎಂದರು.

ಉದ್ಯೋಗದಾತ ಸಂಸ್ಥೆಯ ಮುಖ್ಯಸ್ಥ ರುಕ್ಮಾಂಗದ ಮಾತನಾಡಿ, ಉದ್ಯೋಗಮೇಳದಲ್ಲಿ ಭಾಗವಹಿಸುವ ಎಲ್ಲ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡಬೇಕೆಂಬ ಉದ್ದೇಶ ನಮ್ಮದಾಗಿದೆ. 15 ವರ್ಷಗಳಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಉದ್ಯೋಗ ಮೇಳದ ಮೂಲಕ ಸಾವಿರಾರು ಮಂದಿಗೆ ಉದ್ಯೋಗ ಕೊಡಿಸುತ್ತಿದ್ದೇವೆ. ಇಲ್ಲಿ ಉದ್ಯೋಗ ಕೊಡುವ ಕಂಪೆನಿಗಳನ್ನು ಹಾಗೂ ಉದ್ಯೋಗಾಕಾಂಕ್ಷಿಗಳನ್ನು ಒಂದೆಡೆ ಸೇರಿಸಿ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಕಂಪೆನಿಗಳಿಂದ ಕೆಲಸ ಕೊಡಿಸಲಾಗುತ್ತದೆ. ಈ ಬಾರಿ ಸಹ ನೂರಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದ್ದು, ಹಲವಾರು ಮಂದಿಗೆ ಉದ್ಯೋಗ ದೊರಕುವ ನಿರೀಕ್ಷೆ ಇದೆ ಎಂದರು.

ಈ ವೇಳೆ ಉದ್ಯೋಗ ಮೇಳದ ಕರಪತ್ರ ಹಾಗೂ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಯಾರ‍್ಯಾರು ಅರ್ಜಿ ಸಲ್ಲಿಸಬಹುದು?
ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಬಿಇ, ಬಿ.ಫಾರ್ಮ, ಡಿ.ಫಾರ್ಮ, ನರ್ಸಿಂಗ್, ಬಿ.ಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಬಿಎಂ, ಎಂಬಿಎ, ಎಂಕಾಂ, ಎಂಎಸ್ಸಿ, ಎಂಎಸ್‌ಡಬ್ಲ್ಯೂ ಇನ್ನಿತರೆ ಯಾವುದೇ ಪದವಿ ಪಡೆದಿರುವ, ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣರಾದ ಯುವಕ ಯುವತಿಯರೂ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಚನ್ನಕೇಶವ, ಪುರಸಭಾ ಮಾಜಿ ಉಪಾಧ್ಯಕ್ಷ ರಾಮಲಿಂಗೇಗೌಡ, ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಕಗ್ಗಲೀಪುರ ಕೆ.ಎಂ.ಮಧುಕುಮಾರ್, ಕೇತುಪುರ ಡೇರಿ ಮಾಜಿ ಅಧ್ಯಕ್ಷ ಕೆ.ಬಿ.ಪ್ರಭಾಕರ್, ಪುರಸಭೆ ಸದಸ್ಯರಾದ ಮೂರ್ತಿ, ಶಿವು, ಮಹೇಶ್, ಮಾಜಿ ಉಪಾಧ್ಯಕ್ಷ ಪಾರ್ಥಸಾರಥಿ,ಡೈರಿ ಅಧ್ಯಕ್ಷ ಮರಿಗೌಡ, ಯುವ ಘಟಕದ ಅಧ್ಯಕ್ಷ ಟಿ.ಎಸ್. ಲೋಕೇಶ್, ಯಾಚೇನಹಳ್ಳಿ ಅಶೋಕ್, ಎಪಿಎಂಸಿ ಮಾಜಿ ಸದಸ್ಯ ಉಕ್ಕಲಗರೆ ಬಸವಣ್ಣ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಶಿವಕುಮಾರ್, ಅತ್ತಹಳ್ಳಿ ಗ್ರಾ.ಪಂ.ಅಧ್ಯಕ್ಷ ಮಹೇಶ್, ಮಾಜಿ ಅಧ್ಯಕ್ಷ ಸುನಿಲ್ ಕುಮಾರ್,ಪಿ ಕಾರ್ಡ್ ಬ್ಯಾಂಕ್ ನಿರ್ದೇಶಕ ಟಿ.ಎಸ್. ಪ್ರಸನ್ನ, ಬೀಡನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಕೃಷ್ಣೇಗೌಡ, ರಾಜೂ ಗೌಡ, ಮಲಿಯೂರು ದೊಳ್ಳಯ್ಯ, ಶಿವ ಸಿದ್ದು, ದೀಪು, ಭಾಸ್ಕರ್, ಜೆ.ಉಮೇಶ್, ಲೋಕೇಶ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

29 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

55 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

1 hour ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago