ಗುಂಡ್ಲುಪೇಟೆ: ಮನೆ ಕಟ್ಟಲು ಪತಿ ಸಾಲ ಮಾಡಿದ್ದ ಪರಿಣಾಮ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹಾದೇವಿ (26) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಈಕೆಗೆ ಎಂಟು ವರ್ಷದ ಮಗು ಇದೆ.
ಮಹಾದೇವಿ ಅದೇ ಗ್ರಾಮದ ನಿಂಗರಾಜು ಎಂಬುವವರನ್ನು ವಿವಾಹ ಆಗಿದ್ದರು. ಇತ್ತೀಚೆಗೆ ಹೊಸ ಮನೆ ಕಟ್ಟಲು ನಿಂಗರಾಜು 5 ಲಕ್ಷ ಸಾಲ ಮಾಡಿಕೊಂಡಿದ್ದರು. ಇದರ ಬಗ್ಗೆ ತೀವ್ರ ಚಿಂತೆಗೊಳಗಾಗಿದ್ದ ಮಹಾದೇವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಮಹಾದೇವಿ ತಂದೆ ರಾಜಾನಾಯ್ಕ ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆ ಮನೆಯಲ್ಲಿ ನನ್ನ ಮಗಳಿಗೆ ಯಾವುದೇ ಕಿರುಕುಳ ಇರಲಿಲ್ಲ. ಸಾಲದ ಬಗ್ಗೆ ಚಿಂತಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…