ಚಾಮರಾಜನಗರ

ಹನೂರು: ಕಾಡುಹಂದಿ ದಾಳಿ: ಮುಸುಕಿನ ಜೋಳ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ಸುಮಾರು ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ನಾಶ ಮಾಡಿರುವ ಘಟನೆ ಬುಧವಾರ ತಡರಾತ್ರಿ ಜರುಗಿದೆ.

ಎಂಟಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿರವರಿಗೆ ಸೇರಿದ ಸರ್ವೆ ನಂಬರ್ 294ರಲ್ಲಿ 1.5 ಎಕರೆಯಲ್ಲಿ ಸಮರ್ಪಕ ಮಳೆಯಾಗದಿದ್ದರೂ ಮುಸುಕಿನ ಜೋಳವನ್ನು ತಮ್ಮ ಬೋರ್‌ವೆಲ್‌ನಲ್ಲಿರುವ ನೀರನ್ನು ಬಳಸಿಕೊಂಡು ಕಷ್ಟಪಟ್ಟು ಬೆಳೆದಿದ್ದರು.

ಆದರೆ ಬುಧವಾರ ತಡರಾತ್ರಿ ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ದಾಳಿ ಮಾಡಿ ಒಂದು ಎಕರೆಯಷ್ಟು ತೆನೆ ಕಚ್ಚಿದ್ದ ಜೋಳದ ಫಸಲನ್ನು ಸಂಪೂರ್ಣವಾಗಿ ನಾಶಮಾಡಿದೆ. ಇದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: ಹನೂರು ತಾಲ್ಲೂಕಿನ ಎಂಟಿ ದೊಡ್ಡಿ ಮಲ್ಲಯ್ಯನಪುರ ಗ್ರಾಮಗಳಲ್ಲಿ ಕಾಡಾನೆಗಳು, ಕಾಡು ಹಂದಿಗಳು, ಚಿರತೆ ಸೇರಿದಂತೆ ಇನ್ನಿತರ ಕಾಡುಪ್ರಾಣಿಗಳ ಹಾವಳಿ ನಿರಂತರವಾಗಿ ನಡೆಯುತ್ತಲೇ ಇದೆ. ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ರೈತರು ತಾಲ್ಲೂಕು ಕೇಂದ್ರದಲ್ಲಿ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಾಡುಪ್ರಾಣಿಗಳ ಹಾವಳಿಗೆ ನಿಯಂತ್ರಣ ಮಾಡುವುದಾಗಿ ಕೇವಲ ಭರವಸೆಗಳನ್ನಷ್ಟೇ ನೀಡುತ್ತಿದ್ದಾರೆ. ಇದುವರೆಗೂ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ರೈತ ಮುಖಂಡ ಶ್ರೀನಿವಾಸ್ ಆರೋಪಿಸಿದ್ದಾರೆ.

ಸೂಕ್ತ ಪರಿಹಾರಕ್ಕೆ ಆಗ್ರಹ: ಪುಟ್ಟಸ್ವಾಮಿ ಎಂಬುವವರು ಬೆಳೆದಿದ್ದ ಒಂದು ಎಕರೆ ಮುಸುಕಿನ ಜೋಳವು ಸಂಪೂರ್ಣ ನಾಶವಾಗಿರುವುದರಿಂದ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರಾದ ಪ್ರಕಾಶ್, ಕಾಳಪ್ಪ, ರಘು, ಜಯರಾಜು, ವೆಂಕಟೇಶ್ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago