ಹನೂರು: ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಲಾದರ್ ದೊಡ್ಡಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿದ್ದು, ರೈತರು ತೀವ್ರ ಆತಂಕಗೊಂಡಿದ್ದಾರೆ.
ಗ್ರಾಮದ ಜೋಸೆಫ್ ಎಂಬುವರಿಗೆ ಸೇರಿದ ಜಮೀನಿಗೆ ರಾತ್ರಿ ವೇಳೆ ನುಗ್ಗಿದ ಕಾಡಾನೆಗಳ ಹಿಂಡು, ಜಮೀನಿನಲ್ಲಿ ಚೆನ್ನಾಗಿ ಬೆಳೆದಿದ್ದ ಜೋಳದ ಬೆಳೆಯನ್ನು ತುಳಿದು ಹಾಳು ಮಾಡಿದೆ. ಜೊತೆಗೆ ತೆಂಗಿನ ಮರಗಳನ್ನು ಮುರಿದು ಹಾಕಿದ್ದು, ಜಮೀನಿನಲ್ಲಿದ್ದ ಕೃಷಿ ಪರಿಕರಗಳನ್ನು ಸಹ ನಾಶಪಡಿಸಿದೆ.
ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿದ್ದು, ರಾತ್ರಿಯಾದರೆ ಸಾಕು ಆನೆಗಳು ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಕಾಡಾನೆಗಳ ಭಯದಿಂದ ರೈತರು ರಾತ್ರಿ ವೇಳೆ ಜಮೀನಿಗೆ ಹೋಗಲು ಹೆದರುವಂತಾಗಿದೆ. ಜಮೀನಿನಲ್ಲಿ ಕಾವಲು ಕಾಯುವವರೂ ಆನೆಗಳ ದಾಳಿಗೆ ಸಿಲುಕುವ ಭೀತಿಯಲ್ಲಿದ್ದಾರೆ. ಬೆಳೆ ಕೈಗೆ ಬರುವ ಸಮಯದಲ್ಲೇ ಆನೆಗಳು ದಾಳಿ ಮಾಡಿರುವುದರಿಂದ ರೈತ ಜೋಸೆಫ್ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿನೊಳಗೆ ಹಿಮ್ಮೆಟ್ಟಿಸಲು ಕ್ರಮ ಕೈಗೊಳ್ಳಬೇಕು, ಹಾಗೂ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏರಿಕಾಡು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಕುಡಿಯುವ ನೀರಿನ ಟ್ಯಾಂಕ್ಗೆ ಮುಚ್ಚಳವೇ…
ಬೆಂಗಳೂರಿನಿಂದ ಸುಮಾರು ೯೦ ಕಿ.ಮೀ. ದೂರದಲ್ಲಿರುವ ಕಾವೇರಿ ಮತ್ತು ಅರ್ಕಾವತಿ ಸಂಗಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ೯,೦೦೦ ಕೋಟಿ ರೂ. ವೆಚ್ಚದ…
ಪುಸ್ತಕವೆಂದರೆ ಕೇವಲ ಕಾಗದದ ಮೇಲಿನ ಅಕ್ಷರಗಳಲ್ಲ; ಅದು ಬದುಕಿಗೆ ಬೆಳಕು ನೀಡುವ eನದ ಜ್ಯೋತಿ. ಇಂತಹ ಪುಸ್ತಕಗಳ ಭಂಡಾರವಾಗಿರುವ ಗ್ರಂಥಾಲಯಗಳು…
ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ ಅಧಿಕಾರಿಗಳು ರಾಜ್ಯದ ೯ ಎಪಿಎಂಸಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸಚಿವ…
ಪ್ರಸನ್ನ ಹೆಗ್ಗೋಡು, ರಂಗಕರ್ಮಿ ಇತ್ತೀಚೆಗೆ ನಿಧನರಾದ ಹಿರಿಯ ಲೇಖಕ, ಪ್ರಗತಿಪರ ಚಿಂತಕ ಕೆ.ವಿ.ನಾರಾಯಣ ಕುರಿತು ರಂಗಕರ್ಮಿ ಪ್ರಸನ್ನ ಅವರು ತಮ್ಮ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಜಗತ್ತಿನ ಅತ್ಯಂತ ತಣ್ಣಗಿನ ಮ್ಯಾರಥಾನ್ನಲ್ಲಿ ಈವರೆಗೆ ಭಾಗವಹಿಸಿದ ಏಕೈಕ ಭಾರತೀಯ ರಾಮ್ ಗೋಪಾಲ್ ಕೊಟಾರಿ…