ಚಾಮರಾಜನಗರ: ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿ ಪಾಳ್ಯ ವನ್ಯ ಜೀವಿ ವಲಯದಲ್ಲಿ ಗುರುವಾರ (ಜೂನ್.೨೦) ತಡರಾತ್ರಿ ನಡೆದಿದೆ.
ಮುನಿಯಪ್ಪ, ನಾಗರಾಜು ಮತ್ತು ಜಡೇಸ್ವಾಮಿ ಕಾಡಾನೆಯಿಂದ ದಾಳಿಗೆ ಒಳಗಾದವರಾಗಿದ್ದಾರೆ.
ಆನೆ ಕಾರ್ಯಪಡೆ ಸಿಬ್ಬಂದಿ ರಾತ್ರಿ ಸಮಯದಲ್ಲಿ ಗಸ್ತಿಗೆ ಹೋಗಿದ್ದ ಸಮಯದಲ್ಲಿ ಗುಂಡಿಮಾಳದ ಮುಖ್ಯ ರಸ್ತೆಯ ಬಳಿ ಆನೆ ಗ್ರಾಮಕ್ಕೆ ನುಗ್ಗುತ್ತಿರುವುದನ್ನು ನೋಡಿದ್ದಾರೆ. ಆನೆಯನ್ನು ತಡೆಯಲು ಮುಂದಾದ ವೇಳೆ ಕಾಡಾನೆ ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ.
ದಾಳಿಯಿಂದ ಮುನಿಯಪ್ಪಗೆ ತಲೆ ಮೇಲೆ, ನಾಗರಾಜು ಅವರಿಗೆ ಎಡಗೈಗೆ ಹಾಗೂ ಜಡೇಸ್ವಾಮಿಗೆ ಕಾಲಿಗೆ ಪೆಟ್ಟಾಗಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…