ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ ಬೆಳೆಗಳು ಮಣ್ಣುಪಾಲಾಗುತ್ತಿವೆ. ಭಾನುವಾರ ರಾತ್ರಿ ರೈಲ್ವೆ ತಡೆಗೋಡೆಯನ್ನೇ ದಾಟಿ ಬಂದಿರುವ ಸಲಗವೊಂದು ಮಹದೇವಗೌಡ ಎಂಬುವವರ ಜಮೀನಿಗೆ ನುಗ್ಗಿ ತೆಂಗಿನ ಸಸಿಗಳನ್ನು ನಾಶಪಡಿಸಿದೆ.
ಒಂಟಿಸಲಗದ ನಿರಂತದ ದಾಳಿಗೆ ಬೇಸತ್ತಿದ್ದ ಮಂಚಹಳ್ಳಿ ಹಾಗೂ ಸುತ್ತಲಿನ ಗ್ರಾಮದ ರೈತರು ಅರಣ್ಯ ಇಲಾಖೆ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ಅರಣ್ಯ ಇಲಾಖೆ ಕೇವಲ ಔಚಿತ್ಯಕ್ಕೆ ಒಂದಷ್ಟು ದಿನ ರಾತ್ರಿ ಗಸ್ತು ಸಿಬ್ಬಂದಿಗಳನ್ನು ನೇಮಕ ಮಾಡಿತ್ತು. ಕೆಲ ದಿನಗಳ ಬಳಿಕ ರಾತ್ರಿ ಕಾವಲು ಗಸ್ತು ಸಿಬ್ಬಂದಿಗಳು ಸಕ್ರಿಯರಾಗಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ.
ರೈಲ್ವೆ ತಡೆಗೋಡೆ ದಾಟಿ ಬರ್ತಿದೆ ಸಲಗ: ಆನೆಗಳ ಉಪಟಳಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕಂದಕಗಳನ್ನ ನಿರ್ಮಾಣ ಮಾಡಲಾಗಿತ್ತಾದರೂ ದಕ್ಕದ ಒಂಟಿಸಲಗ ರೈಲ್ವೆ ತಡೆಗೋಡೆಯನ್ನೂ ಲೀಲಾಜಾಲವಾಗಿ ದಾಟಿ ರೈತರ ಜಮೀನಿಗೆ ಲಗ್ಗೆಯಿಡುತ್ತಿರುವುದು ಇಲಾಖೆಗೆ ಹಾಗೂ ರೈತಾಪಿ ವರ್ಗಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಶೀಘ್ರದಲ್ಲೇ ಒಂಟಿ ಸಲಗವನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಕ್ರಮಕ್ಕೆ ಮುಂದಾಗಬೇಕು. ಇಲ್ಲವಾದಲ್ಲಿ ರೈತ ಸಂಘದ ಸಹಕಾರದೊಂದಿಗೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಮಹದೇವಗೌಡ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…