ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ.
ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, ಅದೃಷ್ಟವಶಾತ್ ಅನ್ನದಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಂತರ ಆನೆ ಅದೇ ಗ್ರಾಮದ ಕುಮಾರ್ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸೋಲಾರ್ ಸುತ್ತುಬೇಲಿಯನ್ನು ತುಳಿದು ನಾಶ ಮಾಡಿದೆ.
ಘಟನೆ ನಡೆಯುತ್ತಿದ್ದಂತೆ ಕುರುಬರಹುಂಡಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ಸ್ಥಳಕ್ಕಾಗಮಿಸಿದ ಆರ್‌ಎಫ್ಓ ಸತೀಶ್ ರೈತರ ಮನವೊಲಿಕೆ ಮಾಡಲು ಪ್ರಯತ್ನಿಸಿದರು. ಆದರೂ ರೈತರು ಸ್ಥಳಕ್ಕೆ ಮೇಲಾಧಿಕಾರಿಗಳು ಬರುವಂತೆ ಪಟ್ಟುಹಿಡಿದರು. ನಂತರ ಬೈಕ್ ರಿಪೇರಿ ಮಾಡಿಸಿಕೊಡುವಂತೆ ಹಾಗೂ ಗಾಯಾಳುವಿಗೆ ಚಿಕಿತ್ಸೆ ನೀಡಲು ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು.
ಕುರುಬರಹುಂಡಿ ಮಂಚಹಳ್ಳಿ ಭಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ ನಡೆಸುತ್ತಿದ್ದು, ಸೋಲಾರ್ ಸುತ್ತು ಬೇಲಿ ಮತ್ತು ರೈತರು ಕಷ್ಟಪಟ್ಟು ಬೆಳೆದ ಫಸಲುಗಳನ್ನು ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಕಾಡಾನೆ ನಿಯಂತ್ರಣಕ್ಕೆ ಕಾವಲು ಮಾಡಬೇಕು. ಇಲ್ಲ ರೈಲ್ವೆ ಕಂಬಿ ಅಳವಡಿಸಬೇಕು. ಟ್ರಂಚ್‌ಗಳನ್ನು ತೋಡುವ ಮೂಲಕ ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…