ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ.
ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, ಅದೃಷ್ಟವಶಾತ್ ಅನ್ನದಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಂತರ ಆನೆ ಅದೇ ಗ್ರಾಮದ ಕುಮಾರ್ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸೋಲಾರ್ ಸುತ್ತುಬೇಲಿಯನ್ನು ತುಳಿದು ನಾಶ ಮಾಡಿದೆ.
ಘಟನೆ ನಡೆಯುತ್ತಿದ್ದಂತೆ ಕುರುಬರಹುಂಡಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ಸ್ಥಳಕ್ಕಾಗಮಿಸಿದ ಆರ್‌ಎಫ್ಓ ಸತೀಶ್ ರೈತರ ಮನವೊಲಿಕೆ ಮಾಡಲು ಪ್ರಯತ್ನಿಸಿದರು. ಆದರೂ ರೈತರು ಸ್ಥಳಕ್ಕೆ ಮೇಲಾಧಿಕಾರಿಗಳು ಬರುವಂತೆ ಪಟ್ಟುಹಿಡಿದರು. ನಂತರ ಬೈಕ್ ರಿಪೇರಿ ಮಾಡಿಸಿಕೊಡುವಂತೆ ಹಾಗೂ ಗಾಯಾಳುವಿಗೆ ಚಿಕಿತ್ಸೆ ನೀಡಲು ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು.
ಕುರುಬರಹುಂಡಿ ಮಂಚಹಳ್ಳಿ ಭಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ ನಡೆಸುತ್ತಿದ್ದು, ಸೋಲಾರ್ ಸುತ್ತು ಬೇಲಿ ಮತ್ತು ರೈತರು ಕಷ್ಟಪಟ್ಟು ಬೆಳೆದ ಫಸಲುಗಳನ್ನು ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಕಾಡಾನೆ ನಿಯಂತ್ರಣಕ್ಕೆ ಕಾವಲು ಮಾಡಬೇಕು. ಇಲ್ಲ ರೈಲ್ವೆ ಕಂಬಿ ಅಳವಡಿಸಬೇಕು. ಟ್ರಂಚ್‌ಗಳನ್ನು ತೋಡುವ ಮೂಲಕ ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…