ಚಾಮರಾಜನಗರ

ಹನೂರು| ಕಾಡಾನೆ ದಾಳಿ: ಮುಸುಕಿನ ಜೋಳದ ಫಸಲು ನಾಶ

ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ.

ಗ್ರಾಮದ ಕನಕರಾಜು ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಮುಸುಕಿನ ಜೋಳದ ಫಸಲನ್ನು ತಿಂದು ನಾಶಮಾಡಿವೆ. ಇದಲ್ಲದೇ ಜಮೀನಿನಲ್ಲಿದ್ದ ಕೃಷಿ ಪರಿಕರಗಳನ್ನು ತುಳಿದು ನಾಶಪಡಿಸಿರುವುದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಬೆಳೆ ನಾಶದಿಂದ ತೀವ್ರ ಸಂಕಷ್ಟದಲ್ಲಿರುವ ರೈತ ಕನಕರಾಜುಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದರ ಜೊತೆಗೆ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಮುಂದಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಆನೆಗಳು ನಾಡಿನತ್ತ ಬರದ ಹಾಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

11 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

17 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

28 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago