Wild elephant attacks farmer
ಹನೂರು: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನೋರ್ವನ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಬಸವರಾಜು(50) ಎಂಬುವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಬುಧವಾರ ರಾತ್ರಿ ಒಡೆಯರಪಾಳ್ಯ ಗ್ರಾಮದ ಬಸವರಾಜು ಜಮೀನಿಗೆ ಕಾಡಾನೆ ಲಗ್ಗೆ ಇಟ್ಟು ಮನೆಯ ಮೇಲ್ಚಾವಣಿ ಹಾನಿಗೊಳಿಸಿ ಜೋಳದ ಫಸಲನ್ನು ಮೇಯುತ್ತಿತ್ತು, ಇದನ್ನು ಗಮನಿಸಿದ ರೈತ ಆ ಸ್ಥಳಕ್ಕೆ ತೆರಳಿ ಕಾಡಾನೆ ಓಡಿಸಲು ತೆರಳಿದಾಗ ಆತನ ಮೇಲೆ ಆನೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಪಾರಾಗಲು ಯತ್ನಿಸಿದ ವೇಳೆ ಬಲಗೈ ಪೆಟ್ಟಾಗಿದೆ. ಕುಟುಂಬಸ್ಥರು ಹನೂರಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸಗೆ ಆಗಮಿಸಿದಾಗ ಅದೇ ಮಾರ್ಗದಲ್ಲಿ ಮಹದೇಶ್ವರಬೆಟ್ಟದ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ತೆರಳುತ್ತಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆರವರು ಆತನ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಜಮಾಯಿಸಿದ ರೈತರು ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ನಿರಂತರವಾಗಿ ಕಾಡುಪ್ರಾಣಿಗಳ ಹಾವಳಿ ನಡೆಯುತ್ತಿದೆ, ಇದರಿಂದ ಬೆಳೆ ಹಾಗೂ ಸಾಕು ಪ್ರಾಣಿಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ತೊಂದರೆಯಾಗುತ್ತಿದೆ. ತಾವುಗಳು ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಕ್ರಮ ವಹಿಸಬೇಕು. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾದಾಗ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸಚಿವರು ಪ್ರತಿಕ್ರಿಯಿಸಿ ಈ ಭಾಗದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…