ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಳಿಯಿರುವ ಜಮೀನೊಂದರ ಶೆಡ್ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾತ್ರಿ ಕಾವಲು ಹೋಗಿದ್ದ ಬೆಳ್ಳಪ್ಪ ಎಂಬುವವರು ಸೇರಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಯು ಶೆಡ್‌ನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಅಲ್ಲಿ ಸಂಗ್ರಹಿಸಿಟ್ಟಿದ್ದ
ತರಕಾರಿ ಹಾಗೂ ಸಾಮಾನುಗಳನ್ನು ತಿಂದು ಹಾಕಿದೆ.
ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನೂ ಮುಂದಾದರೂ ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





