ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಾಲೂರು ಮಠದ ಸಮೀಪದ ಜಮೀನಿಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು, ಜೇನುಪೆಟ್ಟಿಗೆ, ತೆಂಗಿನ ಫಸಲು ನಾಶ ಮಾಡಿದೆ.
ಹನೂರು ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಯ ಮಹದೇಶ್ವರ ಬೆಟ್ಟದ ಸರ್ವೆ ನಂ.೧೨೪ರಲ್ಲಿ ಮಾದತಂಬಡಿ ಎಂಬವರಿಗೆ ಸೇರಿದ ಜಮೀನಿಗೆ ಸಮೀಪದ ಅರಣ್ಯ ಪ್ರದೇಶದಿಂದ ಕಾಡಾನೆಗಳ ಹಿಂಡು ನುಗ್ಗಿದ್ದು ಜಮೀನಿನಲ್ಲಿ ಬೆಳೆಯಲಾಗಿದ್ದ ಹಲಸಿನಹಣ್ಣು, ತೆಂಗಿನ ಗಿಡಗಳನ್ನು ತುಳಿದು ನಾಶಪಡಿಸಿವೆ. ಜೊತೆಗೆ ಜಮೀನಿನಲ್ಲಿಟ್ಟಿದ್ದ ಜೇನು ಪೆಟ್ಟಿಗೆಯನ್ನು ನಾಶಗೊಳಿಸಿವೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದ್ದು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮವಹಿಸಿ ಸೂಕ್ತ ಪರಿಹಾರ ನೀಡುವಂತೆ ನೊಂದ ರೈತ ಆಗ್ರಹಿಸಿದ್ದಾನೆ.
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…