ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ ಜರುಗಿದೆ.
ಗುಂಡಾಪುರ, ಬೂದುಬಾಳು ಜಮೀನುಗಳಲ್ಲಿ ಆಹಾರ, ನೀರು ಹರಸಿ ಬಂದಿರುವ ಕಾಡಾನೆಗಳು ಜಮೀನುಗಳಲ್ಲಿ ದಿಕ್ಕ ಪಾಲಾಗಿ ಓಡಾಡಿದ್ದು ಆನೆಗಳನ್ನು ಕಂಡ ರೈತರು ಕೂಲಿ ಕಾರ್ಮಿಕರು ಭಯಗೊಂಡಿದ್ದಾರೆ.
ರೈತ ಮುಖಂಡರು ಮಾತನಾಡಿ, ಕಾಡಾನೆಗಳು ರಾತ್ರಿ ವೇಳೆ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಕೃಷಿ ಪರಿಕರಗಳನ್ನು ನಾಶ ಮಾಡುತ್ತಿದ್ದವು ಇದೀಗ ಬೆಳಗಿನ ವೇಳೆಗೆ ಜಮೀನುಗಳಲ್ಲಿ ಆನೆಗಳು ಹೋರಾಟ ನಡೆಸುತ್ತಿರುವುದರಿಂದ ರೈತರಿಗೆ ಮತ್ತಷ್ಟು ಆತಂಕವನ್ನುಂಟು ಮಾಡಿದೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳು, ಜಮೀನಿಗೆ ಬಾರದಂತೆ ಸೂಕ್ತ ಕ್ರಮ ವಹಿಸಬೇಕು, ಮುಂದಿನ ದಿನಗಳಲ್ಲಿ ನಿಯಂತ್ರಣ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಾಡಾನೆ ಓಡಾಟದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ ಎಂಬ…
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…