ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಪಾಲಾರ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ರಸ್ತೆ ಬದಿಯಲ್ಲಿ ಓಡಾಟ ನಡೆಸಿದ್ದು, ವಾಹನ ಸವಾರರಿಗೆ ಭಯದ ವಾತಾವರಣ ಉಂಟುಮಾಡಿದೆ.
ವಾಹನ ಸವಾರರ ಮೊಬೈಲ್ ನಲ್ಲಿ ಕಾಡಾನೆಗಳ ಓಡಾಟದ ದೃಶ್ಯ ಸೆರೆಯಾಗಿದ್ದು, ಅರಣ್ಯಾಧಿಕಾರಿಗಳು ಮುಖ್ಯರಸ್ತೆಗೆ ಬರುತ್ತಿರುವ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸಲು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಮಾನವ ಪ್ರಾಣಿ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
ಪಾಲಾರ್ ರಸ್ತೆಯಲ್ಲಿ ಎರಡು ಬದಿಯೂ ಕಾಡಾನೆಗಳು ಬೀಡು ಬಿಡುವುದರಿಂದ ವಾಹನ ಸವಾರರು ಪ್ರಾಣಭೀತಿಯಲ್ಲಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗಾಯಗೊಂಡ ಆನೆ ದೃಶ್ಯ ಸೆರೆ: ಪಾಲಾರ್ ರಸ್ತೆಯಲ್ಲಿ ಆನೆಗಳು ಓಡಾಟ ನಡೆಸಿದ ಸಂದರ್ಭದಲ್ಲಿ ಆನೆಯೊಂದರ ಸೊಂಡಿಲಿಗೆ ಗಾಯಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ವಾಹನ ಸವಾರರು ಗಾಯಗೊಂಡ ಆನೆಯ ದೃಶ್ಯವನ್ನು ಸೆರೆ ಹಿಡಿದಿದ್ದು, ಸೊಂಡಿಲಿನ ಭಾಗದಲ್ಲಿ ಗಾಯಗಳಾಗಿದೆ. ಗಾಯಗೊಂಡ ಆನೆ ಮೇಲೆ ಅರಣ್ಯ ಇಲಾಖೆ ನಿಗಾ ಇಟ್ಟು ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…