ಚಾಮರಾಜನಗರ

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚು:ಕನಿಷ್ಠ 50 ಎಕರೆ ನಾಶ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಡ್ತಿಚ್ಚು ಕಾಣಿಸಿಕೊಂಡು ಹತ್ತಾರು ಎಕರೆ ಅರಣ್ಯ ಸುಟ್ಟು ಹೋಗಿದೆ.

ಪುಣಜನೂರಿನಿಂದ ಬೇಡಗುಳಿಗೆ ಹೋಗುವ ರಸ್ತೆಯ ವ್ಯಾಪ್ತಿಯ ಕುರಿದುಂದೆ, ಕುಂಬಳಕಾಯಿ ಗುಡ್ಡ ಪ್ರದೇಶದ 3-4 ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ವಹಿಸಿದ್ದಾರೆ.

ಬೆಳಿಗ್ಗೆಯೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಸಂಜೆಯಾದರೂ ನಂದಿಸಲು ಸಾಧ್ಯವಾಗಿಲ್ಲ. ಕಾಡು ಒಣಗಿದ್ದು, ಗಾಳಿ ಹಾಗೂ ಬಿಸಿಲಿನಿಂದಾಗಿ ಬೆಂಕಿ ವೇಗವಾಗಿ ಹರಡುತ್ತಿದೆ. ಕನಿಷ್ಠ 50 ಎಕರೆಗೂ ಹೆಚ್ಚು ಕಾಡು ಬೆಂಕಿಗೆ ಆಹುತಿಯಾಗಿದೆ ಎಂದು ಅರಣ್ಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಕೋರ್ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿರುವುದರಿಂದ ಅಂದಾಜು ಸಿಗುತ್ತಿಲ್ಲ. ಆದರೆ, ದಟ್ಟ ಹೊಗೆ, ಹೊರದಿಂದಲೇ ಕಾಣಿಸುತ್ತಿದೆ. ಕನಿಷ್ಠ 50 ಎಕರೆ ಅರಣ್ಯ ಬೆಂದು ಹೋಗಿರಬಹುದು. ನೆಲ ಬೆಂಕಿಯಾಗಿದ್ದು, ಎತ್ತರಕ್ಕೆ ವ್ಯಾಪಿಸಿಲ್ಲ. ಬೆಂಕಿ ನಂದಿಸಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ದೀಪ್ ಜೆ.ಕಂಟ್ರ್ಯಾಕ್ಟರ್ ತಿಳಿಸಿದ್ದಾರೆ. ಕಾಡ್ತಿಚ್ಚು ಕಾಣಿಸಿಕೊಂಡಿದೆಯೇ ಅಥವಾ ಸ್ಥಳೀಯರೇ ಬೆಂಕಿ ಹಾಕಿರಬಹುದೇ ಎಂಬ ಬಗ್ಗೆ ಅನುಮಾನವಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

andolana

Recent Posts

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

13 mins ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

30 mins ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

4 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

4 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

4 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

4 hours ago