ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂನ ಮೈಲುಮಲೈ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 15 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ.
ಬೆಂಕಿ ಕಾಣಿಸಿಕೊಂಡಿದ್ದ ಬಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿ ನಂದಿಸಲು ಮುಂದಾದರು. ಬಳಿಕ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
ಈ ಬಗ್ಗೆ ಕಾವೇರಿ ವನ್ಯಧಾಮದ ಎಸಿಎಫ್ ಅಂಕರಾಜು ಪ್ರತಿಕ್ರಿಯಿಸಿ, ಮೈಲುಮಲೈ ಅರಣ್ಯದಲ್ಲಿ ಬೇಸಿಗೆಯಲ್ಲೂ ಹಸಿರಿನಿಂದ ಕೂಡಿರುವ ಪ್ರದೇಶವಾಗಿದೆ. ಈ ಭಾಗದಲ್ಲಿ ಏಳು ವರ್ಷದ ನಂತರ ಬೆಂಕಿ ಬಿದ್ದಿದ್ದೆ. ಈಗಾಗಲೇ ಬೆಂಕಿ ನಂದಿಸಲಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ 20ಕ್ಕೂ ಸಿಬ್ಬಂದಿ ಅರಣ್ಯ ಪ್ರದೇಶದಲ್ಲೇ ಬೀಡು ಬಿಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…