Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ.

ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ, ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಲೆ ಮಹದೇಶ್ವರ ಬೆಟ್ಟ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಭಾಗ್ಯ ಸಂಗ್ರಹಿಸಿಟ್ಟಿದ್ದ 230 ಗ್ರಾಂ ಒಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಜಯರಾಮ, ಪೇದೆಗಳಾದ ಸಿದ್ದರಾಮಯ್ಯ, ರಮೇಶ್, ಮಹೇಶ್, ಶಿವಮೂರ್ತಿ ಪಾಲ್ಗೊಂಡಿದ್ದರು.

Tags:
error: Content is protected !!