ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ.
ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಲೆ ಮಹದೇಶ್ವರ ಬೆಟ್ಟ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಭಾಗ್ಯ ಸಂಗ್ರಹಿಸಿಟ್ಟಿದ್ದ 230 ಗ್ರಾಂ ಒಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಜಯರಾಮ, ಪೇದೆಗಳಾದ ಸಿದ್ದರಾಮಯ್ಯ, ರಮೇಶ್, ಮಹೇಶ್, ಶಿವಮೂರ್ತಿ ಪಾಲ್ಗೊಂಡಿದ್ದರು.
ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ…
ಮಂಡ್ಯ: ನಮ್ಮ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ 1 ಲಕ್ಷದ 30 ಸಾವಿರ…
ಮಡಿಕೇರಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್…
ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಈ…
ಟೆಹರಾನ್: ಇರಾನ್ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ…
ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…