ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.1 ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ. ಚಾಮರಾಜನಗರ ಜಿಲ್ಲೆ ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್ ಒನ್ ಎಂಬ ಪಟ್ಟ ಪಡೆದುಕೊಂಡಿದೆ.
ಅರಣ್ಯಾಧಿಕಾರಿಗಳ ಮಾಹಿತಿ ಪ್ರಕಾರ ಬಂಡೀಪುರದಲ್ಲಿ 1500ಕ್ಕೂ ಹೆಚ್ಚು, ಮಹದೇಶ್ವರ, ಕಾವೇರಿ, ಬಿಆರ್‌ಟಿ ಮೂರು ಸೇರಿ ಅಂದಾಜು 1800ಕ್ಕೂ ಹೆಚ್ಚು ಆನೆಗಳಿವೆ.
ಕಾಡಾನೆ-ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಕೈಗೊಂಡ ಹಲವು ಕಾರ್ಯಕ್ರಮಗಳ ಪರಿಣಾಮ ಆನೆಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ರೈಲ್ವೆ ಬ್ಯಾರಿಕೇಡ್, ಸೋಲಾರ್ ತಂತಿ ಅಳವಡಿಕೆ, ಆನೆ ಕಂದಕ ಸೇರಿದಂತೆ ಹಲವು ಯೋಜನೆಗಳ ಪರಿಣಾಮ ಕಾಡಾನೆಗಳ ಸಂಖ್ಯೆ ಹೆಚ್ಚಳಕ್ಕೆ ನೆರವಾಗಿದೆ.





