ಚಾಮರಾಜನಗರ

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ ಜೆಎಂಎಫ್‌ಸಿ ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶರಾದ ರಂಜಿತ್ ಕುಮಾರ್ ಎಂ ತಿಳಿಸಿದರು.

ತಾಲೂಕಿನ ಮಂಗಲ ಪ್ರೌಢಶಾಲೆಯಲ್ಲಿ ಹನೂರು ಬಫರ್ ವಲಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಉದ್ಘಾಟನೆ ಮಾಡಿ ನಂತರ ಮಾತನಾಡಿದರು.

ಕಾಡಿನಲ್ಲಿ ವಾಸ ಮಾಡುವಂತಹ ವನ್ಯ ಪ್ರಾಣಿಗಳಿಗೆ ನಾವು ಯಾವುದೇ ತೊಂದರೆ ಕೊಡಬಾರದು. ಅಂತಹ ಪ್ರಾಣಿಗಳಿಗೆ ಕಂಟಕವಾಗುತ್ತಿರುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ನಾವು ವರದಿಗಳನ್ನು ಗಮನಿಸುತ್ತಿದ್ದೇವೆ. ಆ ರೀತಿಯ ತೊಂದರೆಗಳು ಕಂಡುಬಂದಲ್ಲಿ ಅಂತಹ ಅಪರಾಧಿಗಳಿಗೆ ಶಿಕ್ಷೆಯನ್ನು ಸಹ ವಿಧಿಸಲಾಗುತ್ತದೆ. ಹಾಗಾಗಿ ಅಂತಹ ಘಟನೆಗಳಿಗೆ ಯಾರು ಸಹ ಕಾರಣರಾಗಬಾರದು. ಪ್ರಕೃತಿಯಲ್ಲಿ ನಮ್ಮ ಪ್ರೀತಿಯಲ್ಲಿ ಪ್ರಾಣಿಗಳು ಸಹ ಬದುಕಲು ದೇವರು ಅವಕಾಶ ಕಲ್ಪಿಸಿದ್ದಾನೆ. ಹಾಗಾಗಿ ಅವುಗಳು ಸಹ ತಮ್ಮಷ್ಟಕ್ಕೆ ತಾವು ತಮ್ಮ ಪ್ರಾಣಿ ಸಂಕುಲವನ್ನು ಹೆಚ್ಚಳ ಮಾಡಿಕೊಳ್ಳಲು ಮುಂದಾಗುತ್ತಿವೆ ಎಂದರು.

ಡಿಸಿಎಫ್ ಭಾಸ್ಕರ್ ಮಾತನಾಡಿ, ಪ್ರಕೃತಿಯಲ್ಲಿ ಸಿಗುವಂತಹ ಶುಭಗಂಧ ನೋಡಿ ಆನಂದ ಪಡಬೇಕು ವಿನಹ ಪ್ರಕೃತಿಯನ್ನು ನಾಶ ಮಾಡಲು ನಾವು ಪಣತೊಡಬಾರದು. ಇತ್ತೀಚಿನ ದಿನಗಳಲ್ಲಿ ಮಾನವ ಪ್ರಕೃತಿಯ ವಿನಾಶಕ್ಕೆ ಕಾರಣವಾಗುತ್ತಿದ್ದು ಪ್ರಾಣಿಗಳ ವಿನಾಶಕ್ಕೆ ಕಾರಣವಾಗುತ್ತಿದ್ದು, ಅಂತಹ ಕೃತ್ಯಗಳಿಗೆ ಕಡಿವಾಣ ಆಗಬೇಕಾಗಿದೆ. ಮಕ್ಕಳ ಬಿಸಿಯಲ್ಲಿ ತಾವೆಲ್ಲರೂ ಕೂಡ ಪ್ರಾಣಿ ಪ್ರಿಯರಾಗಬೇಕು ವನ್ಯಜೀವಿಗಳ ಸಂರಕ್ಷಣೆಗೆ ನಿಮ್ಮದೇ ಆದಂತಹ ಕೊಡುಗೆಗಳನ್ನು ನೀಡಬೇಕು ಎಂದರು.

ಜಾಥಾ ಕಾರ್ಯಕ್ರಮ: ವಿಶ್ವ ವನ್ಯಜೀವಿ ದಿನಾಚರಣೆಯ ಪ್ರಯುಕ್ತ ಶಾಲಾ ಮಕ್ಕಳ ಜೊತೆಗೂಡಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗೌರವಾನ್ವಿತ ನ್ಯಾಯಾಧೀಶರು ಕೂಡ ಜಾಥಾ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಇದೇ ಸಂದರ್ಭದಲ್ಲಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಭಾಸ್ಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿರಾಜ್ ಶ್ರೀ ಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಹನೂರು ಬಫರ್ ವಲಯದ ಅರಣ್ಯ ಅಧಿಕಾರಿ ಜಿತೇಂದ್ರ, ಮಂಗಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಮಕ್ಕಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago