ಯಳಂದೂರು: ತಾಲೂಕಿನ ಆಲ್ಕೆರೆ ಅಗ್ರಹಾರ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ (ನವೆಂಬರ್.18) ಮಧ್ಯಾಹ್ನ ನಡೆದಿದೆ.
ಗ್ರಾಮದ ಮಾದೇವಿ (35) ಎಂಬುವವರೇ ಹಾವು ಕಚ್ಚಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರಿಗೆ ಪತಿ ಮಹೇಶ್ ಹಾಗೂ ಮೂವರು ಹೆಣ್ಣು ಮಕ್ಕಳು ಇದ್ದಾರೆ.
ಇವರು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಇವರ ಕಾಲಿನ ಬೆರಳಿಗೆ ಹಾವು ಕಚ್ಚಿದೆ. ಕೂಡಲೇ ಇವರನ್ನು ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಾದೇವಿ ಮೃತಪಟ್ಟಿದ್ದಾರೆ. ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ವಹಿಸಲಾಗಿದೆ.





