ಚಾಮರಾಜನಗರ

ವೀಕೆಂಡ್‌ ಖುಷಿಯಲ್ಲಿದ್ದವರಿಗೆ ಕಾವೇರಿ ನದಿಯಲ್ಲಿ ಯಮ ದರ್ಶನ: ಏನಾಯ್ತು ಗೊತ್ತಾ.?

ಚಾಮರಾಜನಗರ: ವೀಕೆಂಡ್‌ ಖುಷಿಯಲ್ಲಿದ್ದ ಪ್ರವಾಸಿಗರು ಅರ್ಧ ತಾಸು ಯಮ ದರ್ಶನ ಕಂಡು ಬಳಿಕ ಬದುಕಿದೆ ಬಡಜೀವ ಎಂಬಂತೆ ಪಾರಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಐವರು ಭರಚುಕ್ಕಿ ಜಲಪಾತಕ್ಕೆ ಬಂದಿದ್ದರು. ಅದಾದ ಬಳಿಕ ಶಿವನಸಮುದ್ರ ಮಧ್ಯರಂಗನಾಥ ದೇವಸ್ಥಾನದ ಹಿಂಭಾಗದ ವಿದ್ಯುತ್‌ ಉತ್ಪಾದನೆ ಕೇಂದ್ರಕ್ಕೆ ನೀರು ಒದಗಿಸುವ ಸ್ಥಳದಲ್ಲಿ ಕುಳಿತಿದ್ದಾಗ ಯಮ ದರ್ಶನವನ್ನೇ ಕಂಡು ಪಾರಾಗಿ ಬಂದಿದ್ದಾರೆ.

ನೀರಿನಲ್ಲಿ ಆಟವಾಡಲು ಕುಟುಂಬ ಸಮೇತ ಜೀರೋ ಪಾಯಿಂಟ್‌ನ ನೀರು ಹರಿಯುವ ಬಂಡೆಗಳ ಮೇಲೆ ಹೋಗಿದ್ದಾರೆ. ವಿದ್ಯುತ್‌ ಉತ್ಪಾದನಾ ಕೇಂದ್ರದಿಂದ ಶೇಖರಿಸಿದ್ದ ನೀರನ್ನು ದಿಢೀರನೇ ನದಿಗೆ ಬಿಟ್ಟ ಪರಿಣಾಮ ದಡಕ್ಕೆ ಬರಲಾಗದೇ ಬಂಡೆಗಳ ನಡುವೆ ಸಿಲುಕಿದ್ದಾರೆ. ಅಪಾಯದ ಮುನ್ಸೂಚನೆ ಎಂದು ತಿಳಿದು ತೆಪ್ಪ ನಡೆಸುವವರು ನಡುನೀರಿನಲ್ಲಿ ಇದ್ದವರನ್ನು ದಡಕ್ಕೆ ಕರೆತಂದು ಪಾರು ಮಾಡಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

24 mins ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

58 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

4 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

4 hours ago