ಯಳಂದೂರು: ಬೀದಿ ನಾಯಿಗಳ ದಾಳಿಗೆ ಕುರಿಯೊಂದು ಸಾವನ್ನಪ್ಪಿದ್ದು, ಮತ್ತೊಂದು ಕುರಿ ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕುರಿಯೊಂದು ಸಾವನ್ನಪ್ಪಿದೆ. ಮತ್ತೊಂದು ಕುರಿಗೆ ತೀವ್ರ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು, ಬೀದಿ ನಾಯಿಗಳ ಉಪಟಳ ತಪ್ಪಿಸುವಂತೆ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದು, ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.





