ಹನೂರು : ಮದುವೆಯಾದ ಕೇವಲ 15 ದಿನಗಳಲ್ಲೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಕೀರೆಪಾತಿ ಜಲಾಶಯದ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ತಾಲ್ಲೂಕಿನ ಹಳೆಯೂರು ಗ್ರಾಮದ ಶಿವರುದ್ರ (26) ಎಂದು ಗುರುತಿಸಲಾಗಿದೆ. ಈತ ಕಳೆದ ಜೂನ್ 29 ಮತ್ತು 30ರಂದು ಕೊಕ್ಕಬೆರೆ ಗ್ರಾಮದ ಯುವತಿಯನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ 15 ದಿನದ ಒಳಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಇವರು ಕಿರೆಪಾತಿ ಡ್ಯಾಮ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಈ ಘಟನೆ ತಿಳಿದ ಕೂಡಲೇ ರಾಮಾಪುರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.





