ಚಾಮರಾಜನಗರ

ಯುವಕನ ಜೊತೆ ಯುವತಿ ನಾಪತ್ತೆ ಆರೋಪ: ಯುವತಿ ಸಂಬಂಧಿಕರಿಂದ ಪೊಲೀಸ್‌ ಠಾಣೆ ಎದುರೇ ಚಾಕು ಇರಿತ

ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್‌ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.

ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಜಾಕೀರ್‌ ಹಾಗೂ ಆತನ ಸ್ನೇಹಿತ ಆರ್ಮುಗಮ್‌ ಎಂಬ ಯುವಕನಿಗೆ ಚಾಕು ಇರಿದಿದ್ದಾರೆ.ಕಳೆದ ನಾಲ್ಕು ದಿನಗಳಿಂದ ಯುವತಿ ನಾಪತ್ತೆಯಾಗಿದ್ದು, ಇದಕ್ಕೆ ಮಹೇಂದ್ರ ಎಂಬಾತನೇ ಕಾರಣ ಎಂದು ಯುವತಿ ಸಂಬಂಧಿಕರು ಶಂಕಿಸಿದ್ದಾರೆ.ಇದೇ ವೇಳೆ ಮಹೇಂದ್ರ ಸಂಬಂಧಿ ಆರ್ಮುಗಮ್‌ ಎಂಬಾತ ಮಹೇಂದ್ರ ಕಾಣೆಯಾಗಿದ್ದಾನೆ ಎಂದು ಗುಂಡ್ಲುಪೇಟೆ ಠಾಣೆಗೆ ದೂರು ಕೊಡಲು ಬಂದಿದ್ದಾನೆ.ಈ ವೇಳೆ ಆರ್ಮುಗಮ್‌ಗೆ ಜಾಕಿರ್‌ ಹಾಗೂ ಆತನ ಸ್ನೇಹಿತ ಇಬ್ಬರೂ ಚಾಕು ಇರಿದಿದ್ದಾರೆ.

ಆರ್ಮುಗಮ್‌ ಕುತ್ತಿಗೆ ಭಾಗದಲ್ಲಿ ಚಾಕು ಇರಿಯಲಾಗಿದೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

19 mins ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

2 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

2 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

2 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

2 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

2 hours ago