Mysore
27
overcast clouds

Social Media

ಭಾನುವಾರ, 28 ಜೂನ್ 2026
Light
Dark

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.

ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದ ಜೈಶಂಕರ್‌ರವರ ಪುತ್ರಿ ಮಹೇಶ್ವರಿ (೧೭) ಹಾವು ಕಡಿತಕ್ಕೆ ಒಳಗಾದವರು.

ಶನಿವಾರ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದು ಪ್ರಜ್ಞೆ ತಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಪೋಷಕರು ಯುವತಿಯನ್ನು ತಕ್ಷಣ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾ.ಅಧ್ಯಕ್ಷ ಅಮ್ಜದ್ ಖಾನ್, ಗೌರವಾಧ್ಯಕ್ಷ ರಾಜಣ್ಣ, ಸದಸ್ಯರುಗಳು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

Tags:
error: Content is protected !!