ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್.2) ನಡೆದಿದೆ.
45 ವರ್ಷದ ಪ್ರಸಾದ್ ಎಂಬುವವರೇ ತಮ್ಮ ಸಹೋದರನಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಕುಮಾರ್ (39 ವರ್ಷ) ಕೊಲೆ ಮಾಡಿದ ಪಾಪಿಯಾಗಿದ್ದಾನೆ.
ತನ್ನ ಹೆಂಡತಿಯೊಂದಿಗೆ ಕುಮಾರ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪ್ರಸಾದ್, ಕುಮಾರ್ ಜತೆ ಜಗಳವಾಡಿದ್ದಾನೆ. ಜಗಳ ಅತಿರೇಕಕ್ಕೆ ತಲುಪಿ ಇಬ್ಬರು ಕೈ-ಕೈ ಮಿಲಾಯಿಸಿದ್ದಾರೆ. ಸಿಟ್ಟಿಗೆದ್ದ ಕುಮಾರ್ ಅಣ್ಣನಿಗೆ ಚಾಕುವಿನಿಂದ ಇರಿದಿದ್ದಾನೆ.
ತೀವ್ರ ರಕ್ತಸ್ರಾವದಿಂದ ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕುಮಾರ್‌ನನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…