ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಸಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿತರು. ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ರಸ್ತೆತಡೆ ನಡೆಸಿ, ಉಗ್ರರ ವಿರುದ್ಧ, ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಯಾಮ್‌ನಲ್ಲಿ ಪ್ರವಾಸಿಗರ ಗುಂಪನ್ನು ಗುರುಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ಸಾವಿನ ಸಂಖ್ಯೆ 25 ದಾಟಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ. ಈ ಕ್ರೂರ ಭಯೋತ್ಪದನಾ ಕೃತ್ಯವನ್ನು ಖಂಡಿಸಿ ಮೋದಿ ಸರ್ಕಾರ ಮತ್ತು ಗುಪ್ತಚರ ಸಂಸ್ಥೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಅಮಾಯಕರ ನ್ಯಾಯಕ್ಕಾಗಿ ಒತ್ತಾಯಿಸಿ ಯುವ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದರು.
ದೇಶದ ಪ್ರವಾಸಿಗರಿಗೆ ಭದ್ರತೆ ಕೊಡುವಲ್ಲಿ ವೈಫಲ್ಯವಾಗಿರುವ ದೇಶವ ನರೇಂದ್ರಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಖಾತೆ ಸಚಿವರು ತಮ್ಮ ಸ್ಥಾನಗಳಿಗೆ ನೈತಿಕತೆ ಹೊಣಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಯೋಗೇಂದ್ರ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸೈಯದ್ ಮುಸಾಯಿಬ್, ಇಸ್ಮಾಯಿಲ್ , ಚಂದನ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಮೋಹನ್ ನಗು, ಮುಖಂಡ ನಾಗೇಂದ್ರನಾಯಕ,ಸೈಯದ್ ತೌಸೀಫ್, ಮುತ್ತುರಾಮ್, ಶಶಾಂಕ್, ಪ್ರದೀಪ್, ದರ್ಶನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಪ್ಪು, ಆನಂತ್, ರಾಹುಲ್, ಕಾರ್ತಿಕ್, ನವೀನ್ ಇತರರು ಭಾಗವಹಿಸಿದ್ದರು.





