ಚಾಮರಾಜನಗರ

ಉಗ್ರರ ದಾಳಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ; ನರೇಂದ್ರಮೋದಿ, ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಸಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿತರು. ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ರಸ್ತೆತಡೆ ನಡೆಸಿ, ಉಗ್ರರ ವಿರುದ್ಧ, ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಯಾಮ್‌ನಲ್ಲಿ ಪ್ರವಾಸಿಗರ ಗುಂಪನ್ನು ಗುರುಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ಸಾವಿನ ಸಂಖ್ಯೆ 25 ದಾಟಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ. ಈ ಕ್ರೂರ ಭಯೋತ್ಪದನಾ ಕೃತ್ಯವನ್ನು ಖಂಡಿಸಿ ಮೋದಿ ಸರ್ಕಾರ ಮತ್ತು ಗುಪ್ತಚರ ಸಂಸ್ಥೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಅಮಾಯಕರ ನ್ಯಾಯಕ್ಕಾಗಿ ಒತ್ತಾಯಿಸಿ ಯುವ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದರು.

ದೇಶದ ಪ್ರವಾಸಿಗರಿಗೆ ಭದ್ರತೆ ಕೊಡುವಲ್ಲಿ ವೈಫಲ್ಯವಾಗಿರುವ ದೇಶವ ನರೇಂದ್ರಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಖಾತೆ ಸಚಿವರು ತಮ್ಮ ಸ್ಥಾನಗಳಿಗೆ ನೈತಿಕತೆ ಹೊಣಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಯೋಗೇಂದ್ರ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸೈಯದ್ ಮುಸಾಯಿಬ್,  ಇಸ್ಮಾಯಿಲ್ , ಚಂದನ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಮೋಹನ್ ನಗು, ಮುಖಂಡ ನಾಗೇಂದ್ರನಾಯಕ,ಸೈಯದ್ ತೌಸೀಫ್, ಮುತ್ತುರಾಮ್, ಶಶಾಂಕ್, ಪ್ರದೀಪ್, ದರ್ಶನ,  ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಅಪ್ಪು, ಆನಂತ್, ರಾಹುಲ್, ಕಾರ್ತಿಕ್, ನವೀನ್ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

1 hour ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

2 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago