ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ.
ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದು, ಹನೂರು ತಾಲ್ಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಇಂದು ಅಮಾವಾಸ್ಯೆ ಪೂಜೆಯ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಸಹಸ್ರಾರು ಜನರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಇನ್ನು ನಾಳೆ ಬೆಟ್ಟಕ್ಕೆ ಯುಗಾದಿ ರಥೋತ್ಸವ ನಡೆಯಲಿದ್ದು, ರಥೋತ್ಸವಕ್ಕೆ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಿಂದಲೂ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದೆ.
ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.
ಲಖನೌ : ಮಿಚೆಲ್ ಮಾರ್ಷ್ ಅವರ ಅರ್ಧಶತಕದಾಟ ಹಾಗೂ ಲಖನೌ ಸೂಪರ್ ಜೈಂಟ್ಸ್‌ನ ಬಿಗಿಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್…
ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು…
ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ ಎಂದು ಪ್ರಜಾವಾಣಿಯ ಮೈಸೂರು…
ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ…
ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿದ ಸಂಸದ ಯದುವೀರ್ ಹೊಸದಿಲ್ಲಿ: ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು…
ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ…