ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ.

ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್‌ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ ಹೊರಡಿಸಿದ್ದು, ಹನೂರು ತಾಲ್ಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಇಂದು ಅಮಾವಾಸ್ಯೆ ಪೂಜೆಯ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಸಹಸ್ರಾರು ಜನರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಇನ್ನು ನಾಳೆ ಬೆಟ್ಟಕ್ಕೆ ಯುಗಾದಿ ರಥೋತ್ಸವ ನಡೆಯಲಿದ್ದು, ರಥೋತ್ಸವಕ್ಕೆ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಿಂದಲೂ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದೆ.

ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

3 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

7 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

14 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

15 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

16 hours ago