ಚಾಮರಾಜನಗರ

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹಾಗಾಗಿ ಕೇವಲ ಭರವಸೆ ನೀಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಗುಂಡ್ಲುಪೇಟೆ ತಾಲೂಕಿನ ಕಡಬೂರು ಗ್ರಾಮದ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮಗಳು ಜಾರಿಯಾಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಯೋಜನೆಗಳನ್ನ ತರಲು ಸರ್ಕಾರ ಎಣಗಾಡುತ್ತಿದೆ. ಡಿಸಿಎಂ ಡಿಕೆಶಿ ಹಾಗೂ ಸಚಿವ ಆರ್.ವಿ.ದೇಶಪಾಂಡೆಯವರೆ ಗ್ಯಾರಂಟಿ ಭಾರ ಆಗ್ತಿದೆ ಎಂಬ ಹೇಳಿಕೆಗಳನ್ನ ನೀಡ್ತಿರೋದು ಸರ್ಕಾರದ ವೈಫಲ್ಯತೆಯನ್ನು ತೋರಿಸುತ್ತಿದೆ ಎಂದರು.

ಡಿಕೆಶಿ ಅವರ ಹೇಳಿಕೆಯನ್ನು ನಾನು ಒಪ್ಪೋದಿಲ್ಲ. ಯಾಕಂದ್ರೆ ಆಡಳಿತ ಬಿಗಿಯಿದ್ರೆ ಗ್ಯಾರಂಟಿ ಸಹಿತವಾಗಿ ಅಭಿವೃದ್ಧಿಯನ್ನೂ ಮಾಡಬಹುದಿತ್ತು. ಆದ್ರೆ ಖಜಾನೆ ತುಂಬಿಸಲು ತೆರಿಗೆ ಹೆಚ್ಜಿಸಿರುವುದು ಇವರ ಮತ್ತೊಂದು ಸಾಧನೆ ಎಂದು ಲೇವಡಿ ಮಾಡಿದರು.

ಮತದಾರರ ಮೂಗಿಗೆ ತುಪ್ಪ ಸವರಿರುವ ಕೈ ಸರ್ಕಾರ ಫಲಾನುಭವಿಗಳ ಮೇಲೆ ತೆರಿಗೆ ಭಾರ ಹೊರಿಸಿ ದೊಡ್ಡಮಟ್ಟದ ಹಣ ಕ್ರೋಢೀಕರಣಕ್ಕೆ ಮುಂದಾಗಿದೆ ಎಂದು ಕಿಡಿಕಾರಿದರು.

ಜನರಿಂದ ಸಂಗ್ರಹವಾದ ಹಣ ಸದ್ಬಳಕೆಯಾಗಿಲ್ಲವಾದ ಪರಿಣಾಮವೇ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಸೇರಿದಂತೆ ಬಹುತೇಕ ಇಲಾಖೆಗಳಲ್ಲಿ ಖಾಲಿ ಹುದ್ದೆಗಳಿವೆ. ಇನ್ನೊಂದೆಡೆ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಎರಡೂವರೆ ಲಕ್ಷ ಖಾಲಿ ಹುದ್ದೆಗಳನ್ನ ಭರ್ತಿ ಮಾಡದೆ ಸಬೂಬು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದು ಸರ್ಕಾರದ ಕಿವಿ ಹಿಂಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago