ಚಾಮರಾಜನಗರ : ನಗರದ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಜ್ಯೋತಿ ಬೆಳಗಿಸಿದರು.ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು,ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿ.ಪಂ.ಸಿ.ಇ.ಓ.ಕೆ.ಎಂ.ಗಾಯಿತ್ರಿ,ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ,ತಹಶಿಲ್ದಾರ್ ಬಸವರಾಜು ಇತರ ಗಣ್ಯರು ಇದ್ದರು.