ಸಾಂಸ್ಕೃತಿಕ ಕಲಾತಂಡಗಳ ಶ್ರೀಆಂಜನೇಯಸ್ವಾಮಿ ವಿಗ್ರಹ ಮೂರ್ತಿ ಮೆರವಣಿಗೆ
ಚಾಮರಾಜನಗರ: ಶ್ರೀ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಹನುಮ ಜಯಂತಿಯ ಪ್ರಯುಕ್ತ ನಗರದಲ್ಲಿ ಶ್ರೀಆಂಜನೇಯ ಸ್ವಾಮಿ ವಿಗ್ರಹಮೂರ್ತಿ ಯನ್ನು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯುತು.
ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಶ್ರೀ ಅಭಯ ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ , ಹೋಮಹವನ ನಡೆದು ಮಧ್ಯಾಹ್ನ ಮಹಾ ಮಂಗಳಾರತಿ ನೆರವೇರಿತ್ತು. ತದನಂತರ ಪ್ರಸಾದ ವಿತರಿಸಲಾಯಿತು.
ಮಧ್ಯಾಹ್ನ 3 ಗಂಟೆಯಲ್ಲಿ ಹನುಮ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಉಪವಿಭಾಗಾಧಿಕಾರಿ ಗೀತಾ ಉಡೆದಾಲ ಹಾಗೂ ತಹಸೀಲ್ದಾರ್ ಬಸವರಾಜು ಪುಪ್ಷಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಲಾತಂಡಗಳಾದ ನಂದಿಧ್ವಜ, ವೀರಗಾಸೆ, ಚೆಂಡೆವಾದ್ಯ, ಡೊಳ್ಳುಕುಣಿತ, ಗಾಡಿಗೊಂಬೆ ಸೇರಿ ನಾನಾ ಕಲಾತಂಡಗಳೊಂದಿಗೆ ಯುವಕರು ಕೇಸರ ಧ್ವಜಾ ಹಿಡಿದು ಜೈ ಶ್ರೀರಾಮ್, ಜೈ ಹನುಮ ಘೋಷಣೆ ಕೂಗಿ ಸಂಭ್ರಮಿಸಿದರು.
ಶ್ರೀ ಅಭಯ ಕಾರ್ಯಸಿದ್ದಿ ಆಂಜಜನೇಯ ದೇವಸ್ಥಾನದ ಮುಂಬಾಗದಿಂದ ಹೊರಟ ಮೆರವಣಿಗೆ ತರಕಾರಿ ಮಾರುಕಟ್ಟೆ ರಸ್ತೆ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ , ಭುವನೇಶ್ವರಿ ವೃತ್ತ, ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ರಸ್ತೆ, ವಾಣಿಯರ್ ರಸ್ತೆ, ಗುಂಡ್ಕುಪೇಟೆ ವೃತ್ತ, ದೊಡ್ಡಂಗಡಿ ಬೀದಿ, ರಥದಬೀದಿ ಮಾರ್ಗವಾಗಿ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಸಮಾಪ್ತಿಗೊಂಡಿತು.
ಮೆರವಣೆಗೆಯಲ್ಲಿ ಜಯಂತ್ಯೋತ್ಸವ ಸಮಿತಿ ಸಂಚಾಲಕರಾದ ಶಿವುವಿರಾಟ್, ಪ್ರವೀಣ್, ಮುಖಂಡರಾದ. ಕೆಲ್ಲಂಬಳ್ಳಿ ಸೋಮನಾಯಕ, ಎಪಿಎಂಸಿ ಅಧ್ಯಕ್ಷ ಮನೋಜ್ ಪಟೇಲ್, ಅಮ್ಮನಪುರಮಲ್ಲೇಶ್, ಜಿ.ಪಂಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ನಿಜಗುಣರಾಜು, ಡಿ ವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಸಮಿತಿಯ ಸದಸ್ಯರಾದ ಮಹೇಶ್, ಮಧು, ಹರ್ಷತ್‌ಗೌಡ, ಮಹೇಂದ್ರ, ಸಿ.ವಿ.ಮಣಿಕಂಠ ಇತರರು ಭಾಗವಹಿಸಿದ್ದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…