ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು.
ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ ಕೊಟ್ಟು 200ಕ್ಕೂ ಹೆಚ್ಚು ಧ್ವಜವನ್ನು ಚಾಮರಾಜನಗರ ನಗರಸಭೆಯಿಂದ ತರಿಸಿಕೊಳ್ಳಲಾಗಿದೆ. ಆದರೆ ಹರಿದ, ಅಳತೆ ಏರುಪಾರಾಗಿರುವ, ಬಣ್ಣ ಮಾಸಿದ ತ್ರಿವರ್ಣ ಧ್ವಜಗಳನ್ನು ಪೂರೈಸಿ ವರ್ತಕರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಸಂಬಂಧ ವರ್ತಕರ ಸಂಘದ ಚಿದಾನಂದ ಗಣೇಶ್ ಮಾತನಾಡಿ, ನಗರಸಭೆಯಿಂದ ಎಲ್ಲಾ ವರ್ತಕರಿಗೆ ವಿತರಿಸಲು 200ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ಖರೀದಿಸಿದ್ದೆವು.
ಆದರೆ 200ರಲ್ಲಿ 15 ರಿಂದ 20 ಧ್ವಜಗಳು ಮಾತ್ರ ಹಾರಿಸಲು ಯೋಗ್ಯವಾಗಿವೆ. ನಗರಸಭೆ ಸಿಬ್ಬಂದಿ ಹೇಗೆ ತಂದರೋ, ಧ್ವಜ ನಿರ್ಮಾಣ ಮಾಡುವವರು ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೋ ಎಂದು ಆಕ್ರೋಶ ಹೊರಹಾಕಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…