ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಸ್ತುತ ಸುರಿಯುತ್ತಿರುವ ಮಳೆ ಹಾಗೂ ಮುಂದಿನ ೨ ದಿನಗಳ ಕಾಲ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಆ.೫ ಮತ್ತು ೬ ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಭಾರತೀಯ ಹವಾಮಾನ ಇಲಾಖೆಯು ಮುಂದಿನ ೨ ದಿನಗಳ ಕಾಲ ಜಿಲ್ಲಾದ್ಯಂತ ಅತೀ ಹೆಚ್ಚು ಮಳೆ ಬೀಳುವ ಸಂಭವ ಇದೆ ಎಂದು ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಜಿಲ್ಲಾದ್ಯಂತ ಇರುವ ಎಲ್ಲಾ ಅಂಗನವಾಡಿ, ಎಲ್.ಕೆ.ಜಿ, ಯು.ಕೆ.ಜಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.