ಜಿಲ್ಲೆಗಳು

ಆದಿವಾಸಿಗಳ ಆರೋಗ್ಯ ಕಾಳಜಿಗೆ ಸಿಮ್ಸ್​​ನಲ್ಲಿ ಪ್ರತ್ಯೇಕ ಸೆಲ್ ; ಚಾ.ನಗರದಲ್ಲಿ ಪ್ರಥಮ ಬಾರಿಗೆ ಪ್ರಯೋಗ

ಚಾಮರಾಜನಗರ: ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ, ವಿಶೇಷ ಕಾಳಜಿ ವಹಿಸಲು ಕೋಶವೊಂದು (ಸೆಲ್) ಸಿಮ್ಸ್​​ನಲ್ಲಿ ಸ್ಥಾಪನೆಯಾಗುತ್ತಿದೆ. ಈ‌ ರೀತಿಯ ಪ್ರಯತ್ನ ರಾಜ್ಯದಲ್ಲಿ ಇದೇ ಮೊದಲಾಗಿದೆ.

ಸರ್ಕಾರ ಈಗಾಗಲೇ ಈ ಘಟಕ ಸ್ಥಾಪನೆಗೆ 12 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. “ಆರೋಗ್ಯ ಮಿತ್ರ” ಎಂಬ ಬುಡಕಟ್ಟು ಜನಾಂಗದ ವ್ಯಕ್ತಿಯೋರ್ವ ಘಟಕದಲ್ಲಿದ್ದು, ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಮಾರ್ಗದರ್ಶನ, ಆರೈಕೆ, ಸಂಬಂಧಪಟ್ಟ ವೈದ್ಯರ ಬಳಿಗೆ ಕರೆದೊಯ್ಯುವ ಕೆಲಸ ಮಾಡಲಿದ್ದಾನೆ ನೌಕರಘಟಕ ಸ್ಥಾಪನೆಯಿಂದಾಗಿ‌‌ ಆದಿವಾಸಿಗಳ ಆರೋಗ್ಯದ ಮೇಲೆ ಸಂಶೋಧನೆ ನಡೆಸುವುದು, ಅವರಿಗೆ ಹೆಚ್ಚು ಬಾಧಿಸುವ ಕಾಯಿಲೆಗಳು, ಹೆಚ್ಚು ಆಸ್ಪತ್ರೆಗೆ ಬರುವ ಸಂದರ್ಭಗಳು ಮತ್ತು ಅವರ ಆರೋಗ್ಯದ ಬಗ್ಗೆ ಸಮಗ್ರ ಅಧ್ಯಯನ ಮಾಡಲು ಈ‌ ಕೋಶ ಸಹಕಾರಿಯಾಗಲಿದೆ ಎಂದು ಡಾ.ಸಂಜೀವ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.

andolanait

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

1 hour ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

1 hour ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

13 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

13 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

13 hours ago