ಜಿಲ್ಲೆಗಳು

ಚಾಮರಾಜನಗರ: ಎಎಫ್ಎಸ್ ಅಧಿಕಾರಿಗಳ ವರ್ಗಾವಣೆಗೆ ಜನರ ಆಕ್ರೋಶ

ಚಾಮರಾಜನಗರ: ಜಿಲ್ಲೆಯ ಇಬ್ಬರು ಐಎಫ್ಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಬುಧವಾರ ಸಂಜೆ ಆದೇಶ ಹೊರಡಿಸಿದೆ. ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ಹಾಗೂ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್‌ ಅವರನ್ನು ವರ್ಗಾಯಿಸಲಾಗಿದೆ..

ಸಂತೋಷ್ ಅವರನ್ನು ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮಕ್ಕೆ, ವಿ.ಏಡುಕುಂಡಲು ಅವರನ್ನು ಕೋಲಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಜನಪ್ರಿಯ ಹಾಗೂ ಹಲವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಮನ ಗೆದ್ದಿದ್ದ ಹಾಗು ಕ್ರಿಯಾಶೀಲ ಅಧಿಕಾರಿ ಏಡುಕುಂಡಲು ಅವರ ವರ್ಗಾವಣೆಗೆ ಜನರು ಅಸಮಾಧಾನ ಹೊರಹಾಕಿದ್ದಾರೆ‌.

ಮೈಸೂರು ಕಾರ್ಯ ಯೋಜನೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ದೀಪಾ ಜೆ. ಕಾಂಟ್ರಾಕ್ಟರ್‌ ಅವರನ್ನು ಬಿಆರ್‌ಟಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಈ ಹಿಂದೆ, ಸಚಿವ ಉಮೇಶ್ ಕತ್ತಿ ಬಂದಿದ್ದ ವೇಳೆ ಏಡುಕುಂಡಲು ಅವರನ್ನು ಸದ್ಯಕ್ಕೆ ವರ್ಗಾವಣೆ ಮಾಡಬಾರದು ಎಂದು ರೈತ ಮುಖಂಡರು ಒತ್ತಾಯಿಸಿ ಮನವಿ ಪತ್ರ ಕೊಟ್ಟಿದ್ದರು‌‌.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

14 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

16 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

17 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

20 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

20 hours ago