ಚಾಮರಾಜನಗರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಇವರ ವತಿಯಿಂದ ನಾಳೆ ( ಆ.18 ಗುರುವಾರ) ಸಂಜೆ 5 ಗಂಟೆಗೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಅಮೃತ ವರ್ಷ ಬೆಳ್ಳಿಯ ಸ್ಪರ್ಶ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.
ಜಿಲ್ಲೆ ಗಾಂಧಿವಾದಿಗಳಾದ ಸಿ.ಪಿ ಹುಚ್ಚೇಗೌಡ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಶೈಲ ಕುಮಾರ್ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸವನ್ನು ಸಾಹಿತಿಗಳು ಹಾಗೂ ಚಿಂತಕರಾದ ಕೆ.ವೆಂಕಟರಾಜು ಅವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ರಂಗಸ್ವಾಮಿ ಅವರ ಪುತ್ರ ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷರಾದ ಚಾ.ರಂ.ಶ್ರೀನಿವಾಸಗೌಡ ಹಾಗೂ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರಪ್ಪ ದೊಡ್ಡರಾಯಪೇಟೆ ಅವರು ಪುತ್ರರಾದ ಪರಿಸರವಾದಿ ಪುಣಜನೂರು ದೊರೆಸ್ವಾಮಿ ಭಾಗವಹಿಸಲಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಸುಮಾರು 23 ಮಂದಿ ಸ್ವಾತಂತ್ರ್ಯ ಹೋರಾಟಗಾರರಿದ್ದು, ಅವರಲ್ಲಿ ತೋಟಪ್ಪ, ಲಲಿತಾ ಜಿ,ಮಾದಪ್ಪ ಕಾಗಲವಾಡಿ ಇವರುಗಳು ಮಾತ್ರ ಬದುಕುಳಿದಿದ್ದಾರೆ.
\