ಜಿಲ್ಲೆಗಳು

ಚಾಮರಾಜನಗರ : ನಾಳೆ “ಅಮೃತ ವರ್ಷ ಬೆಳ್ಳಿಯ ಸ್ಪರ್ಶ” ಕಾರ್ಯಕ್ರಮ

ಚಾಮರಾಜನಗರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಇವರ ವತಿಯಿಂದ ನಾಳೆ ( ಆ.18 ಗುರುವಾರ) ಸಂಜೆ 5 ಗಂಟೆಗೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಅಮೃತ ವರ್ಷ ಬೆಳ್ಳಿಯ ಸ್ಪರ್ಶ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.

ಜಿಲ್ಲೆ ಗಾಂಧಿವಾದಿಗಳಾದ ಸಿ.ಪಿ ಹುಚ್ಚೇಗೌಡ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಶೈಲ ಕುಮಾರ್‌ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸವನ್ನು ಸಾಹಿತಿಗಳು ಹಾಗೂ ಚಿಂತಕರಾದ ಕೆ.ವೆಂಕಟರಾಜು ಅವರು ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ರಂಗಸ್ವಾಮಿ ಅವರ ಪುತ್ರ ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷರಾದ ಚಾ.ರಂ.ಶ್ರೀನಿವಾಸಗೌಡ ಹಾಗೂ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರಪ್ಪ ದೊಡ್ಡರಾಯಪೇಟೆ ಅವರು ಪುತ್ರರಾದ ಪರಿಸರವಾದಿ ಪುಣಜನೂರು ದೊರೆಸ್ವಾಮಿ ಭಾಗವಹಿಸಲಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಸುಮಾರು 23 ಮಂದಿ ಸ್ವಾತಂತ್ರ್ಯ ಹೋರಾಟಗಾರರಿದ್ದು, ಅವರಲ್ಲಿ ತೋಟಪ್ಪ, ಲಲಿತಾ ಜಿ,ಮಾದಪ್ಪ ಕಾಗಲವಾಡಿ ಇವರುಗಳು ಮಾತ್ರ ಬದುಕುಳಿದಿದ್ದಾರೆ.

 

\

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago