ಹನೂರು : ವಿವಿಧೆಡೆ ಬೈಕ್‍ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹನೂರು ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿ ನಡೆದಿದೆ.
ಮೈಸೂರು ಅಜೀಜ್‍ಸೇಠ್ ನಗರದ ಅಖ್ತಾರ್‍ಖಾನ್ (23) ಆಲಿಯಾಸ್ ಅಖ್ತಾರ್ ಹಾಗೂ ಕೆಸರೆಯ ದಸ್ತಗೀರ್ ಆಹಮದ್ ಖಾನ್ ಆಲಿಯಾಸ್ ಅರ್ಮಾನ್ ಎಂಬುವವರೇ ಬಂಧಿತ ಆರೋಪಿಗಳು.
ಇವರು ವಿವಿಧೆಡೆ ಬೈಕ್‍ಗಳನ್ನು ಕಳ್ಳತನ ಮಾಡಿ ಇತರರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್‍ಪೆಕ್ಟರ್ ಸಂತೋಷ್ ಕಶ್ಯಪ್ ಅವರ ನೇತೃತ್ವದಲ್ಲಿ ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ ಪ್ರಸಾದ್, ಎಎಸ್‍ಐ ಕೃಷ್ಣ, ಮುಖ್ಯ ಪೇದೆಗಳಾದ ಮಹದೇವಸ್ವಾಮಿ, ಚಂದ್ರು, ಪೇದೆಗಳಾದ ರಾಮಕೃಷ್ಣ, ಶಿವಕುಮಾರ್ ತಂಡ ಆ.4 ರಂದು ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿತ್ತು. ಈ ವೇಳೆ ಬಂಧಿತರು 4 ಬೈಕ್‍ಗಳನ್ನು ಕಳ್ಳತನ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದು, 2 ಬೈಕ್‍ಗಳನ್ನು ಕೊಳ್ಳೇಗಾಲದಲ್ಲಿ ಹಾಗೂ ಒಂದು ಬೈಕ್ ಅನ್ನು ಹನೂರಿನ ಆರ್.ಎಸ್ ದೊಡ್ಡಿಯಲ್ಲಿ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿತು. ಮಾರಾಟ ಮಾಡಿರುವ ಬೈಕ್‍ಗಳನ್ನು ವಶಪಡಿಸಿಕೊಂಡ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದಾರೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…